ಮೆಗಾ ಡೈರಿ ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ 
ರಾಜ್ಯ

ಮಂಡ್ಯದ ಗೆಜ್ಜಲಗೆರೆಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಮೆಗಾ ಡೇರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ

ಕರ್ನಾಟಕಲ್ಲೀಗ ಎಲೆಕ್ಷನ್ ಸಮಯ. ಇನ್ನು ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಆಗಮನ ಕರ್ನಾಟಕಕ್ಕೆ ಆಗಿದೆ.  ಎಲೆಕ್ಷನ್​​​​ಗೆ ಬಿಜೆಪಿ ರಣಕಹಳೆ ಜೋರಾಗಿದ್ದು, ಅಮಿತ್​ ಶಾ ಅವರು ಮಂಡ್ಯದಿಂದಲೇ ರಣತಂತ್ರ ಆರಂಭಿಸಿದ್ದಾರೆ.

ಮಂಡ್ಯ: ಕರ್ನಾಟಕಲ್ಲೀಗ ಎಲೆಕ್ಷನ್ ಸಮಯ. ಇನ್ನು ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಆಗಮನ ಕರ್ನಾಟಕಕ್ಕೆ ಆಗಿದೆ.  ಎಲೆಕ್ಷನ್​​​​ಗೆ ಬಿಜೆಪಿ ರಣಕಹಳೆ ಜೋರಾಗಿದ್ದು, ಅಮಿತ್​ ಶಾ ಅವರು ಮಂಡ್ಯದಿಂದಲೇ ರಣತಂತ್ರ ಆರಂಭಿಸಿದ್ದಾರೆ.  ಅಮಿತ್​ ಶಾ ಮಂಡ್ಯದ ಮೆಗಾ ಡೈರಿ ಉದ್ಘಾಟಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು, ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು. 

ಮೆಗಾ ಡೈರಿಯ ವಿಶೇಷತೆ: ಮದ್ದೂರಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮೆಗಾ ಡೈರಿ, 47 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದ್ದು, ಸುಮಾರು 260.9 ಕೋಟಿ ವೆಚ್ಚದ ಹಾಲು ಉತ್ಪಾದಕ ಘಟಕವಾಗಿದೆ. ಒಂದು ದಿನಕ್ಕೆ 30 ಮೆಟ್ರಿಕ್ ಟನ್ ಹಾಲಿನ ಪೌಡರ್, 4 ಮೆಟ್ರಿಕ್ ಟನ್ ಕೋವಾ, 2 ಮೆಟ್ರಿಕ್ ಟನ್ ಪನ್ನೀರ್, 12 ಮೆಟ್ರಿಕ್ ಟನ್ ತುಪ್ಪ, 10 ಮೆಟ್ರಿಕ್ ಟನ್ ಬೆಣ್ಣೆ, 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೆಗಾ ಡೈರಿಯಿಂದ ಒಂದು ವರ್ಷಕ್ಕೆ 6 ಕೋಟಿ ಹಣ ಉಳಿತಾಯವಾಗಲಿದೆ. 

ಡೇರಿ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಆಗಮಿಸಿದ್ದರು. ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಎಸ್​.ಟಿ. ಸೋಮಶೇಖರ್​​​ ಸೇರಿದಂತೆ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್​ ಮತ್ತಿತರರು ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!