ರಾಜ್ಯ

ಬೆಂಗಳೂರು: ಮಾಸ್ಕ್ ಧಾರಣೆ, ಕೋವಿಡ್ ನಿಯಮ ಪಾಲನೆ ಅತ್ಯಗತ್ಯ; ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ

Manjula VN

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೊರೋನಾ ಮಹಾಮಾರಿ ಆರ್ಭಟಿಸುತ್ತಿದ್ದು, ಈ ಬೆಳವಣಿಗೆ ನಡುವಲ್ಲೇ ಭಾರತದಲ್ಲೂ ಆತಂಕ ಶುರುವಾಗಿದೆ. ಮುಂದಿನ 40 ದಿನಗಳು ಭಾರತಕ್ಕೆ ನಿರ್ಣಾಯಕ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದು, ಹೊಸ ಮಾರ್ಗಸೂಚಿಗಳನ್ನು ಸಮರ್ಥವಾಗಿ ಅನುಸರಿಸಿದರೆ ಪರಿಸ್ಥಿತಿ ನಿಯಂತ್ರಣದಲ್ಲಿರುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿದ್ದೇ ಆದರೆ, ಯಾವುದೇ ಹೊಸ ಕ್ರಮಗಳ ಅಗತ್ಯವಿರುವುದಿಲ್ಲ ಎಂದು ಟಿಎಸಿ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಹೇಳಿದ್ದಾರೆ.

ಜನರು ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಸೂಕ್ತವಾದ ನಡವಳಿಕೆಯನ್ನು ಅನುಸರಿಸಿದರೆ, ಸೋಂಕುಗಳನ್ನು ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳಬಹುದು. ಹೀಗಾಗಿ ಕೋವಿಡ್ ಸೂಕ್ತ ನಡವಳಿಕೆಗಳನ್ನು ಅನುಸರಿಸುವುದು, ಮಾಸ್ಕ್ ಧರಿಸಲು ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಮಾತನಾಡಿ, ಬೆಂಗಳೂರಿನಲ್ಲಿ ಸುಮಾರು 1,500 ರಿಂದ 5,000 ಕೋವಿಡ್ ಪರೀಕ್ಷೆಗಳ ಸಂಖ್ಯೆಗಳನ್ನು ಹೆಚ್ಚಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳು ಮತ್ತು ಮಾಸ್ಕ್‌ಗಳ ಬಳಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ, ಮಾಸ್ಕ್ ಧರಿಸದಿದ್ದಕ್ಕಾಗಿ ದಂಡ ವಿಧಿಸಲಾಗುವುದು ಎಂದಿದ್ದಾರೆ.

ಭಾರತೀಯರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿದೆ. ಗರಿಷ್ಠ ಜನಸಂಖ್ಯೆಯು ಎರಡು ಡೋಸ್‌ಗಳ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಒಂದು ವೇಳೆ ಸೋಂಕಿತರ ಸಂಖ್ಯೆ ಹೆಚ್ಚಾದರೂ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಗಳಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಎಲ್ಲಾ ವೈರಸ್‌ಗಳಂತೆ, SARS-CoV-2 ರಾತ್ರೋರಾತ್ರಿ ಕಣ್ಮರೆಯಾಗುವುದಿಲ್ಲ, ಇದು ಸಾಂಕ್ರಾಮಿಕ ರೋಗದಿಂದ ಅಂತಿಮ ರೋಗದ ಹಂತದವರೆಗೂ ಸಾಗುವ ಸಾಧ್ಯತೆಗಳಿವೆ. ಹೊಸ ರೂಪಾಂತರ BF.7ನ ಲಕ್ಷಣಗಳು ಮೂಗು ಸೋರುವುದು, ಗಂಟಲಿನಲ್ಲಿ ನೋವು, ಜ್ವರ, ಕೆಮ್ಮು, ವಾಂತಿ, ನಿಶ್ಯಕ್ತಿ, ಅತಿಸಾರವಾಗಿದೆ ಎಂದು ನಾರಾಯಣ ಹೆಲ್ತ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದಾರೆ.

SCROLL FOR NEXT