ಸಿಎಂ ಬೊಮ್ಮಾಯಿ 
ರಾಜ್ಯ

ಮುಂದಿನ ವರ್ಷ ಮೈಶುಗರ್ ನಲ್ಲಿ ಎಥನಾಲ್ ಘಟಕ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ

ಮೈ ಶುಗರ್ ನಲ್ಲಿ ಮುಂದಿನ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಡ್ಯ( ಮದ್ದೂರು): ಮೈ ಶುಗರ್ ನಲ್ಲಿ ಮುಂದಿನ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  

ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಇಂದು ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿಯನ್ನು ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತ ಬಂಧುಗಳು ಶ್ರಮಿಸುತ್ತಿದ್ದಾರೆ. ಹಾಲು ಉತ್ಪಾದನೆ ಮಾಡುವ ರೈತ ಮಹಿಳೆಯರಿಗೆ ವಿಶೇಷವಾಗಿ ಮುಖ್ಯ ಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು. 

1 ಲಕ್ಷ ಲೀಟರ್ ಹಾಲು ಸಂಸ್ಕರಿಸುವ ಸಾಮರ್ಥ್ಯ
ಸಮಗ್ರ ಕೃಷಿಯಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಅದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕರ್ನಾಟಕದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲದಲ್ಲಿ ಪ್ರೋತ್ಸಾಹ ಧನ ನೀಡುವುದು ಪ್ರಾರಂಭವಾಗಿ ಇಂದು 5.00 ರೂ.ಗಳನ್ನು ಪ್ರತಿ ಹಾಲು ಉತ್ಪಾದಕನಿಗೆ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ತನ್ನದೇ ಆದ ಸವಾಲುಗಳಿದ್ದರೂ ಇಂದು ಅದನ್ನು ಸರಿದೂಗಿಸಿ ಮುನ್ನುಗ್ಗುತ್ತಿದೆ. ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ 1 ಲಕ್ಷ ಲೀ. ಹಾಲು ಸಂಸ್ಕರಣೆ ಮಾಡುವ ಸಾಮರ್ಥ್ಯವಿದೆ ಎಂದರು. 

ಮೆಗಾ ಡೈರಿಯಲ್ಲಿ ಸ್ವಾವಲಂಬಿ ವ್ಯವಸ್ಥೆ
ರೈತನ ಬದುಕು ಅನಿಶ್ಚಿತತೆಯಿಂದ ಕೂಡಿರುವ ಈ ಸಂದರ್ಭದಲ್ಲಿ ಅವನ ಬದುಕಿಗೆ ನಿಶ್ಚಿತತೆ ತಂದುಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷಿ ಇಲಾಖೆಯಿಂದ ಸಹಕಾರವನ್ನು ಬೇರ್ಪಡಿಸಿ, ಸಹಕಾರ ಇಲಾಖೆ ಸೃಜಿಸಿ ಭಾರತ ದೇಶದಲ್ಲಿ ಸಹಕಾರ ರಂಗಕ್ಕೆ ಶಕ್ತಿ ತುಂಬಿದ್ದು, ಇದರಿಂದ ಒಂದು ಕ್ರಾಂತಿಯಾಗಲಿದೆ. ಹಲವಾರು ಸುಧಾರಣೆಗಳನ್ನು ತರುವ ಪ್ರಯತ್ನ ಗಳನ್ನು ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರದ್ದು ಬೆಂಗಳೂರಿನ ಪ್ರಥಮ ಮೆಗಾ ಡೈರಿ ಸ್ಥಾಪನೆಯಲ್ಲಿ ಮಹತ್ವದ ಪಾತ್ರವಿದೆ. ಅದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಲ್ಲಿಂದ ಪ್ರಾರಂಭವಾದ ಮೆಗಾ ಡೈರಿ ಇಂದು ಎಲ್ಲೆಡೆ ಸ್ಥಾಪನೆಯಾಗುತ್ತಿದೆ. ಸ್ವತಂತ್ರವಾಗಿ ಹಾಲು ಉತ್ಪಾದಿಸಿ, ಸಂಸ್ಕರಿಸಿ, ಪ್ಯಾಕ್ ಮಾಡಿ, ವಿವಿಧ ಪದಾರ್ಥಗಳನ್ನು ತಯಾರಿಸಿ ಸ್ವಾವಲಂಬನೆಯ ವ್ಯವಸ್ಥೆ ಮೆಗಾ ಡೈರಿಯಲ್ಲಿ ಆಗುತ್ತಿದೆ. ನಮ್ಮ ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ ಎಂದರು. 

 ರೈತರ ಯೋಜನೆಗಳಿಗೆ ಒಂದು ವಾರದೊಳಗೆ ಅನುಮೋದನೆ
ಮಂಡ್ಯ ಜಿಲ್ಲೆ ಒಕ್ಕಲುತನದಿಂದ ಕೂಡಿದೆ. ಸಕ್ಕರೆ ನಾಡು, ಭತ್ತದ ಖನಿಜ. ಮಂಡ್ಯದ ಅಭಿವೃದ್ಧಿಗೆ ಇನ್ನಷ್ಟು ನೀರಾವರಿ ಮತ್ತು ಕೈಗಾರಿಕೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೈ ಶುಗರ್ ಸಂಸ್ಥೆಯನ್ನು ಸರ್ಕಾರಿ ವಲಯದ ಮೂಲಕ ಪ್ರಾರಂಭಿಸಿದೆ. ವಿಶ್ವೇಶ್ವರ ನಾಲೆಯ ನೀರಾವರಿಯ ಕೊನೆ ಭಾಗದಲ್ಲಿರುವ ರೈತರಿಗೆ   ಯೋಜನೆಗಳನ್ನು ರೂಪಿಸುತ್ತಿದ್ದು, ಒಂದು ವಾರದಲ್ಲಿ ಅವೆಲ್ಲಕ್ಕೂ ಅನುಮೋದನೆ ನೀಡಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT