ರಾಜ್ಯ

ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ 10 ವರ್ಷದ ಬಾಲಕ; ಗುತ್ತಿಗೆದಾರನ ವಿರುದ್ಧ ದೂರು

Ramyashree GN

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಪ್ರಕರಣಖ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಆರೋಪಿಯನ್ನು ಮಹದೇವಪ್ಪ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಬಾಲಕ ವೀರೇಶ್ ಎನ್ನಲಾಗಿದೆ. ಕಳೆದ ವಾರ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶವಾಗಿತ್ತು. ಆಟದ ಮೈದಾನದಲ್ಲಿ ವಿದ್ಯುತ್ ತಂತಿಗಳು ಹರಡಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ವಿದ್ಯುತ್ ಬಳಸಿ ನೀರಿನ ಟ್ಯಾಂಕ್ ನಿರ್ಮಿಸುವ ವೇಳೆ ಆಟದ ಮೈದಾನದಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರರು ವಿದ್ಯುತ್ ಕಂಬದಿಂದ ಅಕ್ರಮವಾಗಿ ಸಂಪರ್ಕ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ಲಕ್ಷ್ಯ ವಹಿಸಿರುವ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವಿದ್ಯುದಾಘಾತದ ನಂತರ ಜ್ಞಾಪಕ ಶಕ್ತಿಯನ್ನು ಕಳೆದುಕೊಂಡಿದ್ದಲ್ಲದೆ, ಬಾಲಕನ ಕೈಗೆ ಗಂಭೀರವಾದ ಸುಟ್ಟ ಗಾಯಗಳಾಗಿವೆ.

ಗುತ್ತಿಗೆದಾರನ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

SCROLL FOR NEXT