ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಜನವರಿ 3ಕ್ಕೆ ಪ್ರಕಟ
ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಕಳೆದ ವಾರ ಬೆಳಗಾವಿಯ ವಿಧಾನಸಭೆ ಕಲಾಪದಲ್ಲಿ ತಿಳಿಸಿದ್ದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.