ಸಂಗ್ರಹ ಚಿತ್ರ 
ರಾಜ್ಯ

ನಿಷೇಧಿತ ರೂ.500 ನೋಟುಗಳ ಬದಲಿಸಲು ಯತ್ನ: ಮೂವರು ಆರೋಪಿಗಳ ಬಂಧನ, ರೂ.88 ಲಕ್ಷ ಮೌಲ್ಯದ ನೋಟುಗಳು ವಶಕ್ಕೆ

ಕೆಲ ವರ್ಷಗಳ ಹಿಂದೆ ರದ್ದುಗೊಂಡಿರುವ ರೂ.500 ಮುಖಬೆಲೆಯ ನೋಟುಗಳನ್ನು ಬದಲಾಯಿಸಲು ಯತ್ನಿಸಿದ ಮೂವರು ಆರೋಪಿಗಳನ್ನು ಬನಶಂಕರಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಕೆಲ ವರ್ಷಗಳ ಹಿಂದೆ ರದ್ದುಗೊಂಡಿರುವ ರೂ.500 ಮುಖಬೆಲೆಯ ನೋಟುಗಳನ್ನು ಬದಲಾಯಿಸಲು ಯತ್ನಿಸಿದ ಮೂವರು ಆರೋಪಿಗಳನ್ನು ಬನಶಂಕರಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಗಳನ್ನು ಪದ್ಮನಾಭನಗರ ನಿವಾಸಿ ಯೋಗಾನಂದಂ ಅಲಿಯಾಸ್ ಯೋಗೇಶ್ (39), ಆಂಧ್ರಪ್ರದೇಶದ ಪುಟ್ಟಪರ್ತಿ ಮೂಲದ ವೆಂಕಟ್ ನಾರಾಯಣ್ ಅಲಿಯಾಸ್ ರಾಜಣ್ಣ ಎಂ (60) ಮತ್ತು ಹರಿಪ್ರಸಾದ್ (53) ಎಂದು ಗುರುತಿಸಲಾಗಿದೆ.

ಕದಿರೇನಹಳ್ಳಿ ಸೇತುವೆ ಬಳಿ ನಿಷೇಧಿತ ನೋಚು ವಿನಿಮಯ ಮಾಡಿಕೊಳ್ಳಲು ಕಾರಿನಲ್ಲಿ ಕೆಲವರು ಕಾದು ಕುಳಿತಿದ್ದಾರೆ ಎಂಬ ಖಚಿತ ಮಾಹಿತಿಗಳು ತಿಳಿದುಬಂದಿತ್ತು. ಇದರಂತೆ ಸ್ಥಳಕ್ಕೆ ಧಾವಿಸಿ ಕಾರನ್ನು ಪರಿಶೀಲಿಸಿದಾಗ ನಿಷೇಧಿತ 40 ಲಕ್ಷ ರೂ ನೋಟುಗಳು ಪತ್ತೆಯಾಗಿತ್ತು. ಇದರಂತೆ ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಮನೆಯಲ್ಲಿ ಇನ್ನೂ ರೂ.48 ಲಕ್ಷ ನಿಷೇಧಿತ ನೋಟುಗಳನ್ನು ಇರಿಸಿರುವುದು ತಿಳಿದುಬಂದಿತ್ತು. ಆ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳು ಯಾರೊಂದಿಗೆ ನಿಷೇಧಿತ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ. ಇದೀಗ  ಆರೋಪಿಗಳ ವಿರುದ್ಧ 2017 ರ ನಿರ್ದಿಷ್ಟ ಬ್ಯಾಂಕ್ ನೋಟುಗಳ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ