ಕೆಎಂ ಕರಿಯಪ್ಪ ಕಾಲೇಜಿನ ವಿದ್ಯಾರ್ಥಿಗಳು 
ರಾಜ್ಯ

ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರ

ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ...

ಬೆಂಗಳೂರು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ರಾಜ್ಯಾದ್ಯಂತ ವ್ಯಾಪಿಸಿದ್ದು, ಹಲವು ಕಡೆ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ನಾಳೆಯಿಂದ ಮೂರು ದಿನ ಹೈಸ್ಕೂಲ್ ಹಾಗೂ ಕಾಲೇಜ್ ಗಳಿಗೆ ರಜೆ ಘೋಷಿಸಿದೆ.

ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ನಾನು ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ನೀಡಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟವರೆಲ್ಲರೂ ಸಹಕರಿಸಬೇಕಾಗಿ ವಿನಂತಿ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಹೆಚ್ಚಾದ ಕಾರಣ ಮತ್ತು ಹೈಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸರ್ಕಾರ ಹಾಗೂ ಖಾಸಗಿ ಪದವಿಪೂರ್ವ ಕಾಲೇಜ್ ಗಳಿಗೆ ಮೂರು ದಿನ ರಜೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!