ಹೈಕೋರ್ಟ್ 
ರಾಜ್ಯ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗರಂ: ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೊಟೀಸ್

ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಇಂದು ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದೆ.

ಬೆಂಗಳೂರು: ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಇಂದು ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದೆ.

ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ, ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ನೋಟಿಸ್ ನೀಡಿದೆ. ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ ಪ್ರಸಾದ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಿದ್ದರು.

ಕೊರೋನಾ ಕೇಸ್​ ಹೆಚ್ಚುತ್ತಿರೋ ಹೊತ್ತಲ್ಲಿ ಪಾದಯಾತ್ರೆ ಬೇಕಿತ್ತಾ ಎಂದು  PILನಲ್ಲಿ ಪ್ರಶ್ನಿಸಿದ್ದರು.  ಇದೀಗ ಹೈಕೋರ್ಟ್​​, ಪಾದಯಾತ್ರೆ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ, ಜನವರಿ 14ರಂದು ನಮಗೆ ಉತ್ತರ ಕೊಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ಕರ್ನಾಟಕ ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ನಾಯಕರು ಕೊರೊನಾ ನಿಮಯಗಳನ್ನ ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಬೇಕೆದು ಹೈಕೋರ್ಟ್ ಗೆ ವಕೀಲ ಶ್ರೀಧರ್ ಪ್ರಭು ಎಂಬುವವರು ಕೂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.

ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆ ನಡೆಸಲು ಅನುಮತಿ ನೀಡಿಲ್ಲ ಎಂದಾದ ಮೇಲೆ ಪಾದಯಾತ್ರೆ ತಡೆಯಲು ಹಿಂಜರಿಕೆ‌ ಏಕೆ. ಸರ್ಕಾರ ಅಷ್ಟೊಂದು ಅಸಮರ್ಥವಾಗಿದೆಯಾ? ನ್ಯಾಯಾಲಯ ನೆರವಿಗೆ ಬರಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಈ ಅಪಾಯಕಾರಿ ಸಂದರ್ಭದಲ್ಲಿ ಜನ ಸೇರುವ ರ್ಯಾಲಿ, ಧರಣಿ, ಪ್ರದರ್ಶನ, ಮೆರವಣಿಗೆಗಳಿಗೆ ನಿರ್ಬಂಧ ಹೇರಿದ್ದರೂ, ಅವುಗಳಿಗೆ ಅವಕಾಶ ನೀಡುತ್ತಿರುವುದು ಹೇಗೆ? ವಿಶೇಷವಾಗಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಹೇಗೆ ಮುಂದುವರಿಸಿದೆ, ಅದನ್ನು ತಡೆಯಲು ಕ್ರಮ ಕೈಗೊಂಡಿಲ್ಲವೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕೋವಿಡ್ ಹೆಚ್ಚುತ್ತಿರುವಾಗ ನೀವು ಹೇಗೆ ಪಾದಯಾತ್ರೆ ನಡೆಸುತ್ತೀರಿ, ಪಾದಯಾತ್ರೆ ನಡೆಸಲು ಸರ್ಕಾರದ ಅನುಮತಿ ತೆಗೆದುಕೊಂಡಿದ್ದೀರಾ, ಸರ್ಕಾರದ ಮಾರ್ಗಸೂಚಿ ಪಾಲಿಸಲು ನಿಮ್ಮ ಕ್ರಮವೇನು, ನೀವು ಪಾಲಿಸುತ್ತಿರುವ ಕೊರೋನಾ ನಿಯಮಗಳೇನು ನಾಳೆಯೊಳಗೆ ಉತ್ತರಿಸಿ ಎಂದು ಕೆಪಿಸಿಸಿಗೆ ನೊಟೀಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಜ.14ಕ್ಕೆ ಹೈಕೋರ್ಟ್ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT