ರಾಜ್ಯ

ಸುಧಾರಣಾ ಕ್ರಮಗಳ ಅನುಷ್ಠಾನ: ಡಿಪಿಐಐಟಿ ಪಟ್ಟಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

Shilpa D

ಬೆಂಗಳೂರು: ಕರ್ನಾಟಕ ಕೈಗಾರಿಕ ಸ್ನೇಹಿ ಕಾರ್ಯಕ್ರಮಗಳು ಮತ್ತು ಪರಿಣಾಮಕಾರಿಯಾಗಿ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಬಗ್ಗೆ ನಿರಂತರವಾದ ಪ್ರೋತ್ಸಾಹ ನೀಡುತ್ತಿರುವ ಪರಿಣಾಮ ಸುಲಲಿತ ವ್ಯವಹಾರಗಳ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ ದೊರೆತಿದೆ. 17ನೇ ಸ್ಥಾನದಿಂದ ಟಾಪ್‌ ಅಚೀವರ್‌ ಆಗಿ ರಾಜ್ಯ ಹೊರಹೊಮ್ಮಿದೆ.

ಕಳೆದ ವರ್ಷ ಡಿಪಿಐಐಟಿ ಸೂಚಿಸಿದ್ದ 187 ಸುಧಾರಣಾ ಕ್ರಮಗಳಲ್ಲಿ ಶೇ.100ರಷ್ಟು ಅನುಷ್ಠಾನಗೊಳಿಸಿದ್ದರೂ, ಕರ್ನಾಟಕ 2019 ರಲ್ಲಿ 17ನೇ ಸ್ಥಾನಕ್ಕೆ ಕುಸಿದಿತ್ತು. ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ, ಈ ಶ್ರೇಣಿಗೆ ಏರಲು ಸಾಧ್ಯವಾಗಿದೆ.

ನಮ್ಮ ಸರ್ಕಾರ ಸುಲಲಿತ ವ್ಯವಹಾರಕ್ಕೆ ಒತ್ತು ನಮ್ಮ ಸರ್ಕಾರ ಸುಲಲಿತ ವ್ಯವಹಾರಕ್ಕೆ ಒತ್ತು "ಸುಲಲಿತ ವ್ಯವಹಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕೈಗಾರಿಕಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಇದ್ದ ತೊಡಕು ನಿವಾರಿಸಲಾಗಿದೆ. ನಮ್ಮ ಸರ್ಕಾರ ಸುಲಲಿತ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಿರುವುದರಿಂದ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೆಚ್ಚು ಬಂಡವಾಳ ಹೂಡುತ್ತಿದ್ದಾರೆ" ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ಆರ್‌. ನಿರಾಣಿ ಹೇಳಿದರು.

ಆಂಧ್ರ ಪ್ರದೇಶ, ಗುಜರಾತ್‌, ಹರ್ಯಾಣ, ಪಂಜಾಬ್‌, ತಮಿಳುನಾಡು, ತೆಲಂಗಾಣ ಸಹ "ಅಗ್ರ ಸಾಧಕ" ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಡಿಪಿಐಐಟಿ ಶ್ರೇಯಾಂಕ ನಿರ್ಧರಿಸುತ್ತದೆ ಡಿಪಿಐಐಟಿ ಶ್ರೇಯಾಂಕ ನಿರ್ಧರಿಸುತ್ತದೆ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಮಿಕರ ನಿಯಂತ್ರಣ ಕಾಯ್ದೆ, ಪರಿಸರ ಪರವಾನಗಿ, ಪ್ರಕ್ರಿಯೆಗಳ ಸರಳೀಕರಣ, ಬಳಕೆದಾರರ ಸಂಪರ್ಕ, ಪ್ರತಿಕ್ರಿಯೆ, ಕುಂದುಕೊರತೆಗಳ ನಿವಾರಣೆ ಸೇರಿದಂತೆ ವಿವಿಧ ಅಂಶಗಳ ಸಮೀಕ್ಷೆ ನಡೆಸಿದ ಡಿಪಿಐಐಟಿ ಶ್ರೇಯಾಂಕ ನಿರ್ಧರಿಸುತ್ತದೆ.

ಕರ್ನಾಟಕ ಉದ್ಯೋಗ ಮಿತ್ರ ಕರ್ನಾಟಕ ಉದ್ಯೋಗ ಮಿತ್ರ "ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಪೂರಕವಾದ ಸುಧಾರಣಾ ಕ್ರಮಗಳ ಅನುಷ್ಠಾನವನ್ನು ಖಾತ್ರಿಪಡಿಸುವ ನೋಡಲ್‌ ಏಜೆನ್ಸಿ 'ಕರ್ನಾಟಕ ಉದ್ಯೋಗ ಮಿತ್ರ' ಡಿಪಿಐಐಟಿ ಮಾಡಿದ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಫಲವಾಗಿ ರಾಜ್ಯ ಇಂದು ಅಗ್ರ ಶ್ರೇಯಾಂಕ ಪಡೆಯಲು ಸಾಧ್ಯವಾಗಿದೆ" ಎಂದು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಡಾ.ಇ ವಿ ರಮಣರೆಡ್ಡಿ ಹೇಳಿದ್ದಾರೆ.

SCROLL FOR NEXT