ರಾಜ್ಯ

ಬೆಂಗಳೂರು: ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ!

Vishwanath S

ಬೆಂಗಳೂರು: ಕೆಂಗೇರಿಯ ರಾಮಸಂದ್ರದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು ಅತ್ಯಾಚಾರ-ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಮಹಿಳೆಯ ವಯಸ್ಸು 25-30 ಇರಬಹುದು ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಎಫ್ಎಲ್ ತಂಡ ಭೇಟಿ ನೀಡಿ ಘಟನಾ ಸ್ಥಳದಲ್ಲಿದ್ದ ಕೆಲ ವಸ್ತುಗಳನ್ನು ಪರೀಕ್ಷೆಗಾಗಿ ಶೇಖರಿಸಿದೆ. 

ಮಹಿಳೆಯ ಮೃತದೇಹವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯಲಿದೆ.

SCROLL FOR NEXT