ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 746 ಸೇರಿ ರಾಜ್ಯದಲ್ಲಿ 826 ಮಂದಿಗೆ ಪಾಸಿಟಿವ್; ಸಾವು ಶೂನ್ಯ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 826 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40077 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 746 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,0,6716ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 600 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,25,500ಕ್ಕೆ ಏರಿಕೆಯಾಗಿದೆ. ಇನ್ನು 6666 ಸಕ್ರಿಯ ಪ್ರಕರಣಗಳಿವೆ.

SCROLL FOR NEXT