ರಾಜ್ಯ

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಜನರು ಅಸ್ವಸ್ಥ: ಸಾವಿನ ಸಂಖ್ಯೆ 7ಕ್ಕೇರಿಕೆ

Sumana Upadhyaya

ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ವಲ್ಕಂ ದಿನ್ನಿ ಗ್ರಾಮದ 10 ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರು ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಕ್ಕೀಡಾಗಿದ್ದಾರೆ.

ಕಲುಷಿತ ನೀರು ಕುಡಿದು ಅಸ್ವಸ್ಥಕ್ಕೀಡಾಗುವುದು ಇದೇ ಮೊದಲಲ್ಲ, ಕಳೆದ ಮೇ ತಿಂಗಳಲ್ಲಿ ರಾಯಚೂರಿನ ಇಂದಿರಾ ನಗರದ ನಿವಾಸಿಗಳು ಕಲುಷಿತ ನೀರು ಕುಡಿದು ಓರ್ವ ಮಹಿಳೆ ಮೃತಪಟ್ಟಿದ್ದರು. 60ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಜಿಲ್ಲೆಯ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿರಾನಗರದ ಮಲ್ಲಮ್ಮ ಮೃತಪಟ್ಟಿದ್ದರು. ಕುಡಿಯುವ ನೀರಿಗೆ ಚರಂಡಿ ನೀರು ಸೇರುತ್ತಿರುವ ಆರೋಪ ಕೇಳಿಬಂದಿದೆ. 

ಹಲವರು ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ಚಿಕ್ಕಮಕ್ಕಳು ಹೆಚ್ಚು ಬಾಧಿತರಾಗಿದ್ದಾರೆ. ಈಗಾಗಲೇ 6 ಮಂದಿ ಮೃತಪಟ್ಟಿದ್ದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇಂದು ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಟ್ಟಾರೆ ಇದುವರೆಗೆ ಕಲುಷಿತ ನೀರು ಕುಡಿದು 7 ಮಂದಿ ಮೃತಪಟ್ಟಿದ್ದಾರೆ.

ವಲ್ಕಂ ದಿನ್ನಿಗೆ ತುಂಗಭದ್ರಾ ನದಿಯಿಂದ ನೀರು ಪೂರೈಕೆಯಾಗುತ್ತದೆ.

SCROLL FOR NEXT