ಐಎಎಸ್ ಅಧಿಕಾರಿ ಮಂಜುನಾಥ್ 
ರಾಜ್ಯ

ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಿಸಿಹೆಚ್ 24ರ ಎಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಲಕ್ಷ್ಮೀ ನಾರಾಯಣ ಭಟ್ ಈ ಆದೇಶ ಪ್ರಕಟಿಸಿದ್ದಾರೆ. ಲಂಚ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಂಜುನಾಥ್ ಅವರನ್ನು ಕೋರಮಂಗಲದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಮಂಜುನಾಥ್ ಅವರನ್ನು ಹಾಜರುಪಡಿಸಲಾಯಿತು.

ನ್ಯಾಯಾಧೀಶರು ಜುಲೈ 16 ರವರೆಗೂ ಮಂಜುನಾಥ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ.  ಇದರಿಂದಾಗಿ ಐಎಎಸ್ ಅಧಿಕಾರಿ ಮಂಜುನಾಥ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. 

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಿ.ಮಂಜುನಾಥ್‌ ಅವರನ್ನು  ಎಸಿಬಿ ಅಧಿಕಾರಿಗಳು  ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?