ಮಂಜುನಾಥ್ 
ರಾಜ್ಯ

5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ  ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ. ಮಂಜುನಾಥ್‌ ಅವರನ್ನು ಎಸಿಬಿ ಸೋಮವಾರ...

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಅವರನ್ನು ಎಸಿಬಿ ಸೋಮವಾರ ಬಂಧಿಸಿದೆ.

ಲಂಚ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಇಂದು ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಲಂಚ ಪ್ರಕರಣದಲ್ಲಿ ಮಂಜುನಾಥ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡುವಂತೆ ಕೋರಿ ಬೆಂಗಳೂರು ಎಸಿಬಿ ಪೊಲೀಸರು ಭ್ರಷ್ಟಾಚಾರ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ವರದಿಗೆ ಸಮ್ಮತಿಸಿರುವ ವಿಶೇಷ ನ್ಯಾಯಾಲಯ ಐಎಎಸ್ ಅಧಿಕಾರಿ ಮಂಜುನಾಥ್ ವಿಚಾರಣೆಗೆ ಹಸಿರು ನಿಶಾನೆ ತೋರಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಇಂದು ಮಂಜುನಾಥ್ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇತ್ತು. ಈ ಪ್ರಕರಣದ ಪೂರ್ಣ ವಿಚಾರಣೆ ನಡೆಸಿದ್ದ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತೀರ್ಪು ಪ್ರಕಟ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದ ಅರ್ಜಿದಾರ ಆಜಂಪಾಷಾ ಅವರಿಗೆ ಅಧೀನ ಸಿಬ್ಬಂದಿ ಮಹೇಶ್ ಅವರನ್ನು ಕಾಣಲು ಸೂಚಿಸಲಾಗಿತ್ತು. ಮಹೇಶ್ ಅವರನ್ನು ಭೇಟಿ ಮಾಡಿದಾಗ, "ನಿನ್ನ ಪರ ಅನುಕೂಲಕರ ತೀರ್ಪು ನೀಡಲು 5 ಲಕ್ಷ ರೂ. ಲಂಚ ನೀಡುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವ್ಯವಸ್ಥಾಪಕ ಮಹೇಶ್ ಹಾಗೂ ನ್ಯಾಯಾಲಯ ವಿಭಾಗದ ಚೇತನ್ ಕುಮಾರ್ ಬೇಡಿಕೆ ಇಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?