ರಾಜ್ಯ

ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮುಂದುವರಿದ ಮಳೆ: ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ

Sumana Upadhyaya

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ಕೂಡ ಭಾರೀ ಮಳೆ ಮುಂದುವರಿದಿದೆ. ಬೆಳ್ತಂಗಡಿ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚನೆ ಮೇರೆಗೆ ತಹಶಿಲ್ದಾರ್ ರಜೆ ನೀಡಿದ್ದಾರೆ. 

ಸುಳ್ಯ ತಾಲ್ಲೂಕಿನ ಕಡಬ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮಳೆ ಅವಾಂತರ ಮುಂದುವರಿದೆ. ಹಲವೆಡೆ ಮಣ್ಣು ಕುಸಿತ ಮುಂದುವರಿದಿದೆ. ಹಲವು ಕಡೆ ಮರಗಳು ಧರೆಗುರುಳಿವೆ. ಉತ್ತರ ಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲ, ಜೋಯಿಡಾ, ಕುಮಟಾ, ಕಾರವಾರ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳಿಂದ ಕೊಂಚ ಬಿಡುಗಡೆಗೊಂಡಿದ್ದ ಮಳೆ ಇಂದು ಮತ್ತೆ ಹೆಚ್ಚಾಗಿದೆ. ಇನ್ನೂ ಎರಡು-ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. 

ಚಿಕ್ಕಮಗಳೂರು ಜಿಲ್ಲೆಯ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೊಡಗಿನಲ್ಲಿ ಮಳೆಯಿಂದ ಮಡಿಕೇರಿ ತಾಲ್ಲೂಕಿನ ಭಾಗಮಂಡಲ-ನಾಪೊಕ್ಲು ರಸ್ತೆ ಜಲಾವೃತವಾಗಿದೆ. 

SCROLL FOR NEXT