ಸರಳ ವಾಸ್ತು ಚಂದ್ರಶೇಖರ ಗುರೂಜಿ 
ರಾಜ್ಯ

ಹುಬ್ಬಳ್ಳಿ: ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ

ಸರಳ ವಾಸ್ತು ಖ್ಯಾತಿಯ ಬಾಗಲಕೋಟೆಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿಯ ಹೋಟೆಲ್‌ನಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಹುಬ್ಬಳ್ಳಿ:  ಸರಳ ವಾಸ್ತು ಖ್ಯಾತಿಯ ಬಾಗಲಕೋಟೆಯ ಚಂದ್ರಶೇಖರ ಗುರೂಜಿ ಅವರನ್ನು ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿಯ ಹೋಟೆಲ್‌ನಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಅವರ ಹೊಟ್ಟೆ ಮತ್ತು ಕುತ್ತಿಗೆಗೆ ಹಲವು ಬಾರಿ ಇರಿದು ಕೊಂದಿದ್ದಾರೆ.

ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದ ಅವರು ಸರಳ ವಾಸ್ತು ಸಲಹೆ ಬಗ್ಗೆ ಹಲವು ಪುಸ್ತಕ ಬರೆದಿದ್ದಾರೆ. ಈವರೆಗೂ 2 ಸಾವಿರಕ್ಕೂ ಅಧಿಕ ಸೆಮಿನಾರ್‌ಗಳಲ್ಲಿ ಮಾತನಾಡಿರುವ ಚಂದ್ರಶೇಖರ್‌, ಈವರೆಗೂ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ. ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಕಾಸ್ಮಿಕ್ ಆರ್ಕಿಟೆಕ್ಚರ್ ನಲ್ಲಿ ಡಾಕ್ಟರೇಟ್ ಪದವಿಯನ್ನೂ ಅವರು ಸಂಪಾದಿಸಿದ್ದರು.

ಆಶೀರ್ವಾದ ಪಡೆಯುವ ನೆಪದಲ್ಲಿ ಬಂದಿದ್ದ ದುಷ್ಕರ್ಮಿಗಳು ಮಂಗಳವಾರ ಮಧ್ಯಾಹ್ನ ಹೋಟೆಲ್‌ನ ಲಾಬಿಯಲ್ಲಿ ಚಂದ್ರಶೇಖರ್‌ಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯನ್ನು ಕಂಡು ದಿಗ್ಭ್ರಮೆಗೊಂಡ ಅಲ್ಲಿದ್ದ ಜನ ಹಾಗೂ ಹೋಟೆಲ್ ಸಿಬ್ಬಂದಿ ಗುರೂಜಿಯನ್ನು ರಕ್ಷಿಸಲು ಮುಂದಾಗಲಿಲ್ಲ. ದುಷ್ಕರ್ಮಿಗಳು ಸ್ಥಳದಿಂದ ಓಡಿಹೋದ ನಂತರ, ಗುರೂಜಿಯನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ವಿದ್ಯಾನಗರ ಪೊಲೀಸರ ಪ್ರಕಾರ, ಮುಂಬೈನಿಂದ ಬಂದ ಬಳಿಕ ಗುರೂಜಿ ಜುಲೈ 2ರಿಂದ ಹುಬ್ಬಳ್ಳಿಯ ಆ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. 

ಘಟನೆಯ ನಂತರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಲಾಭು ರಾಮ್, ಡಿಸಿಪಿಗಳು ಮತ್ತು ಇತರ ಉನ್ನತ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿ ತನಿಖೆ ನಡೆಸಿದರು. ಇಡೀ ಚೂರಿ ಇರಿತದ ಘಟನೆ ಹೋಟೆಲ್‌ನ ಸಿಸಿಟಿವಿಯಲ್ಲಿ ದಾಖಲಾಗಿದೆ. ಗುರೂಜಿ ಬಂದು ಸೋಫಾದ ಮೇಲೆ ಕುಳಿತ ಕೂಡಲೇ ಆಶೀರ್ವಾದ ಪಡೆಯುವ ನೆಪದಲ್ಲಿ ದುಷ್ಕರ್ಮಿಗಳಲ್ಲಿ ಒಬ್ಬ ಅವರನ್ನು ಭೇಟಿಯಾಗಿ ಕಾಲು ಮುಟ್ಟಿ ನಮಸ್ಕರಿಸಿದನು. ಅನಂತರ ಸ್ವಲ್ಪ ಸಮಯದಲ್ಲೇ ಇಬ್ಬರೂ ಅವರನ್ನು ಇರಿದು ಕೊಲ್ಲಲು ಪ್ರಾರಂಭಿಸಿದರು.

ಘಟನೆ ನಡೆದ ಕೂಡಲೇ ಇಬ್ಬರು ಹಂತಕರು ಹೋಟೆಲ್‌ನಿಂದ ಓಡಿ ಕಾರುಗಳಲ್ಲಿ ಪರಾರಿಯಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT