ಪೌರ ಕಾರ್ಮಿಕರು 
ರಾಜ್ಯ

ಬೇಡಿಕೆ ಈಡೇರಿಸುವ ಭರವಸೆ: ಪೌರಕಾರ್ಮಿಕರ ಮುಷ್ಕರ ಅಂತ್ಯ

ರಾಜ್ಯಾದ್ಯಂತ ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಪೌರಕಾರ್ಮಿಕರು ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ತಮ್ಮ ಸೇವೆಗಳನ್ನು ಕಾಯಂಗೊಳಿಸುವ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದ ನಂತರ ಸೋಮವಾರ ಮುಷ್ಕರ ವಾಪಸ್ ಪಡೆದಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದ ಪೌರಕಾರ್ಮಿಕರು ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ತಮ್ಮ ಸೇವೆಗಳನ್ನು ಕಾಯಂಗೊಳಿಸುವ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಭರವಸೆ ನೀಡಿದ ನಂತರ ಸೋಮವಾರ ಮುಷ್ಕರ ವಾಪಸ್ ಪಡೆದಿದ್ದಾರೆ.

ಸರ್ಕಾರದ ಮೇಲೆ ಒತ್ತಡ ಹೇರಲು ಜುಲೈ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ನಗರ ಪಾಲಿಕೆ, ಗ್ರಾಮ ಸಭೆಗಳು ಮತ್ತು ಪಟ್ಟಣ ಪಂಚಾಯತ್ ಪೌರಕಾರ್ಮಿಕ ಮಹಾ ಸಂಘಗಳ ಅಧ್ಯಕ್ಷ ನಾರಾಯಣ ಮೈಸೂರು ಕರೆ ನೀಡಿದ್ದರು. ಅದೇ ದಿನ ಸಂಜೆ 6.30ಕ್ಕೆ ಸಿಎಂ ಅವರ ಅಧಿಕೃತ ನಿವಾಸ ಕೃಷ್ಣಾದಲ್ಲಿ ಸಭೆ ನಡೆಸಿ, ಅವರ ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿ ಶಾಶ್ವತ ಸ್ಥಾನಮಾನ ನೀಡಲು ಇರುವ ಕಾನೂನು ಅಂಶಗಳನ್ನು ವಿವರಿಸಿ ವರದಿ ಸಲ್ಲಿಸಲಾಗುವುದು ಎಂಬ ನಡಾವಳಿ ಪ್ರತಿಯನ್ನು ರವಾನಿಸಲಾಯಿತು. 

ವಕೀಲ ಮತ್ತು ಹೋರಾಟಗಾರ ವಿನಯ್ ಶ್ರೀನಿವಾಸ ಅವರು, "ಸರ್ಕಾರವು ಪ್ರಕ್ರಿಯೆಯ ಇತ್ತೀಚಿನ ಪ್ರತಿಯನ್ನು ಬಿಡುಗಡೆ ಮಾಡಿದೆ ಮತ್ತು ಮುಂದಿನ ಮೂರು ತಿಂಗಳಲ್ಲಿ ಶಾಶ್ವತ ಸ್ಥಾನಮಾನ ನೀಡಲು ಕಾಲಮಿತಿಯನ್ನು ಉಲ್ಲೇಖಿಸಿದೆ" ಎಂದು ಹೇಳಿದರು.

ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ಆಯುಕ್ತ ಹರೀಶ್ ಕುಮಾರ್ ಪಾಲಿಕೆಗೆ ಮಾಹಿತಿ ನೀಡಿ, ಕಸಗುಡಿಸುವ ಯಂತ್ರಗಳನ್ನು ನಿಯೋಜಿಸಿದ್ದರಿಂದ ಅನೇಕ ಕಸಗುಡಿಸುವವರು ಮುಷ್ಕರದಲ್ಲಿದ್ದರೂ ರಸ್ತೆಗಳನ್ನು ಸ್ವಚ್ಛವಾಗಿಡಲು ಸ್ವಲ್ಪ ಸಮಸ್ಯೆ ಎದುರಾಗಿದೆ. ಪೌರಕಾರ್ಮಿಕರ ಸಂಭಾವನೆ ಹೆಚ್ಚಿಸುವ ಕುರಿತು ಶುಕ್ರವಾರ ಆದೇಶ ಹೊರಡಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!