ಬಸವರಾಜ ಬೊಮ್ಮಾಯಿ 
ರಾಜ್ಯ

ಮನೆ ದೇವ್ರ ದೇವಸ್ಥಾನ ಅಭಿವೃದ್ಧಿಗೆ ಸಿಎಂ ಸಂಕಲ್ಪ: ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ 26 ಕೋಟಿ ರು. ಹಣ!

ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಅಂದಾಜು 26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೈಯ್ಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಚಿಂತನೆ ನಡೆಸಿದ್ದು, ಈ ಕುರಿತು ಸಭೆ ನಡೆಸಿದರು.

ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಅಂದಾಜು 26 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೈಯ್ಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಚಿಂತನೆ ನಡೆಸಿದ್ದು, ಈ ಕುರಿತು ಸಭೆ ನಡೆಸಿದರು.

ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಸವದತ್ತಿ ಶಾಸಕ ಆನಂದ್ ಮಾಮನಿ, ದೇವಸ್ಥಾನದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ವರದಿ ಸಿದ್ದಪಡಿಸುವಂತೆ ಸೂಚಿಸಿದರು. ದೇವಸ್ಥಾನದಲ್ಲಿ ವಸತಿ‌ ನಿರ್ಮಾಣ ಸೇರಿದಂತೆ ಸೂಚಿಸಿದ ಅವರು, ವಾಸ್ತವ್ಯಕ್ಕೆ 400 ಕೊಠಡಿಗಳಿದ್ದು, ಇನ್ನೂ 200 ಕೊಠಡಿ ಹೆಚ್ಚಿಸಬೇಕು. ವಸತಿ ಸಮುದಾಯದಗಳ ಕೆಳಗೆ ಅನ್ನದಾಸೋಹ ಕೇಂದ್ರ ತೆರೆಯಬೇಕು ಎಂದು ಹೇಳಿದ್ದಾರೆ.

1,20,000 ಸ್ಕ್ವೇರ್ ಫೀಟ್ ನಲ್ಲಿ ವಸತಿ ಸಮುಚ್ಚಯ, ಸ್ನಾನಗೃಹ, ಶೌಚ ಗೃಹ ನಿರ್ಮಾಣ, ದೇವಸ್ಥಾನದಲ್ಲಿ 2 ಪ್ರತ್ಯೇಕ ಸರತಿ ಸಾಲು, ಒಂದು ವಿಶೇಷ ದರ್ಶನಕ್ಕೆ ಸರತಿ ಸಾಲಿಗೆ ಅವಕಾಶ ನೀಡಬೇಕು. ದೇವಸ್ಥಾನದ ಸುತ್ತಲಿನ 3 ಜಾಗಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ, ಫುಟ್‌ಪಾತ್ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ಸೂಚನೆ ನೀಡಿದ್ದಾರೆ.

ವ್ಯಾಪಾರಸ್ಥರಿಗೆ ಪ್ರತ್ಯೇಕ ಅಂಗಡಿ ಮುಂಗಟ್ಟುಗಳಿಗೆ ಸ್ಥಳಾವಕಾಶ, ದೇವಸ್ಥಾನದ ಸ್ವಚ್ಚತೆಗೆ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರ ನೇಮಕ ಮಾಡಬೇಕು ಎಂದು ಹೇಳಿದ ಅವರು, ಸವದತ್ತಿ ಶಾಸಕ ಆನಂದ್ ಮಾಮನಿ ನೇತೃತ್ವದಲ್ಲಿ ಜುಲೈ 20 ರಂದು ಮತ್ತೊಂದು ಸಭೆ ನಡೆಸಿ ಅಂತಿಮ ವರದಿ ಸಲ್ಲಿಸುವಂತೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT