ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಸುಂದರ ಪುರುಷರ ಫೋಟೋ ಅಪ್ ಲೋಡ್ ಮಾಡಿ ಮಹಿಳೆಯರಿಗೆ ವಂಚಿಸುತ್ತಿದ್ದಾತ ಅಂದರ್!

ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ಸುಂದರ ಪುರುಷರ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 39 ವರ್ಷದ ಸೈಬರ್ ಕ್ರಿಮಿನಲ್ ಒಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ಸುಂದರ ಪುರುಷರ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 39 ವರ್ಷದ ಸೈಬರ್ ಕ್ರಿಮಿನಲ್ ಒಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ ತಿಪಟೂರಿನ ವಿದ್ಯಾನಗರದ ನಿವಾಸಿಯಾಗಿರುವ ಆರೋಪಿ ನವೀನ್ ವೈ ಸಿಂಗ್ ಎಂಬಾತ, ಅಪರಿಚಿತ ಪುರುಷರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಿಂದ ಪಡೆದು ವೈವಾಹಿಕ ತಾಣಗಳಲ್ಲಿ ಪೋಸ್ಟ್ ಮಾಡಿ ವಂಚಿಸುತ್ತಿದ್ದ.

ವೈವಾಹಿಕ ತಾಣದಗಳಲ್ಲಿ ಮಹಿಳೆಯರ ಫೋನ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಿದ ನಂತರ, ಅವನು ಅವರಿಗೆ ನಿಯಮಿತವಾಗಿ ಕರೆ ಮಾಡುತ್ತಿದ್ದ. ಇದರ ಜೊತೆಗೆ ಮದುವೆಯ ದಿನಾಂಕವನ್ನು ಅಂತಿಮಗೊಳಿಸುವವರೆಗೂ ಮಹಿಳೆಯರ ಮನೆಗೆ ಭೇಟಿ ನೀಡುವುದನ್ನು ಮುಂದೂಡುತ್ತಲೇ ಇದ್ದನು.

ತಾನು ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ ಆರೋಪಿ, ಗೃಹೋಪಯೋಗಿ ವಸ್ತುಗಳ ಮೇಲೆ ಉತ್ತಮ ರಿಯಾಯಿತಿ ಪಡೆದಿದ್ದಾಗಿ ಹೇಳಿದ್ದ. 24 ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬಳು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಸುಮಾರು 7 ಲಕ್ಷ ರೂಪಾಯಿ ಹಣ ನೀಡಿ ಕಳೆದುಕೊಂಡಿದ್ದಾಳೆ. ಈತ ದೇಶಾದ್ಯಂತ ಮಹಿಳೆಯರಿಗೆ ಮೋಸ ಮಾಡುತ್ತಿದ್ದ ಎನ್ನಲಾಗಿದೆ.

ರಾಮನಗರದ ಕಾನೂನು ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಪ್ಲೈವುಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನವೀನ್ ಎಂಬಾತನನ್ನು ಬಂಧಿಸಲಾಗಿದೆ. ಮಹಿಳೆಯರಲ್ಲಿ ಆಸಕ್ತಿ ಮೂಡಿಸಲು ಮತ್ತು ಬಂಧನದಿಂದ ಪಾರಾಗಲು ತನ್ನ ಪ್ರೊಫೈಲ್ ಚಿತ್ರದ ಬದಲಿಗೆ ಸುಂದರ ಪುರುಷರ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿದ್ದ. ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿ ಮಹಿಳೆಯರನ್ನು ವಂಚಿಸುತ್ತಿದ್ದ’ ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದರು.

ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ಕಂಡಕ್ಟರ್‌ಗಳಿಂದ ತಮ್ಮ ಆಯ್ಕೆಯ ಸ್ಥಳಗಳಿಗೆ ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ತನ್ನ ತಂದೆಯ ಚಿಕಿತ್ಸೆಗಾಗಿ ಮತ್ತು ಅವನ ಕೆಟ್ಟ ಚಟಗಳಿಗಾಗಿ ಈ ಹಣವನ್ನುದುರುಪಯೋಗ ಪಡಿಸಿಕೊಂಡಿದ್ದಾನೆ.

ಮುಂಬೈ, ಗುಜರಾತ್, ಛತ್ತೀಸ್‌ಗಢ, ಪುಣೆ, ಆಂಧ್ರಪ್ರದೇಶ ಮತ್ತು ಕರ್ನಾಟಕದ ಕೆಲವು ಪೊಲೀಸ್ ಠಾಣೆಗಳಲ್ಲಿ ದಾಖಲಾದ 28 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT