ವಾಸ್ತುತಜ್ಞ ಚಂದ್ರಶೇಖರ ಗುರೂಜಿ 
ರಾಜ್ಯ

ಆಸ್ತಿ ವಿಚಾರಕ್ಕೆ ಚಂದ್ರಶೇಖರ ಗುರೂಜಿ ಹತ್ಯೆ: ಆರೋಪಿಗಳು ತಪ್ಪೊಪ್ಪಿಗೆ

ಹುಬ್ಬಳ್ಳಿಯ ಹೋಟೆಲ್‌ವೊಂದರಲ್ಲಿ ಮೊನ್ನೆ ಮಂಗಳವಾರ ಚಾಕುವಿನಿಂದ ಇರಿದು ಹತ್ಯೆಗೀಡಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಹೋಟೆಲ್‌ವೊಂದರಲ್ಲಿ ಮೊನ್ನೆ ಮಂಗಳವಾರ ಚಾಕುವಿನಿಂದ ಇರಿದು ಹತ್ಯೆಗೀಡಾದ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಇಬ್ಬರು ಮಾಜಿ ಉದ್ಯೋಗಿಗಳು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.

ಸರಳ ವಾಸ್ತು ಸಂಸ್ಥೆಯ ಮುಖ್ಯಸ್ಥ ಚಂದ್ರಶೇಖರ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆಗೈದ ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮರೇವಾಡ ಅವರನ್ನು ಅದೇ ದಿನ ಘಟನೆ ನಡೆದ ನಾಲ್ಕು ಗಂಟೆಯೊಳಗೆ ಬಂಧಿಸಿದ ಪೊಲೀಸರು ನ್ಯಾಯಾಲಯದ ಮುಂದೆ ನಿನ್ನೆ ಹಾಜರುಪಡಿಸಿದ್ದರು. ಈ ವೇಳೆ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇವರಿಬ್ಬರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಬಳಿ ಪೊಲೀಸರು ಬಂಧಿಸಿದ್ದರು. 

ಗುರೂಜಿ ಅವರು ರಿಯಲ್ ಎಸ್ಟೇಟ್ ವ್ಯವಹಾರವನ್ನು ಪ್ರಾರಂಭಿಸಿದ್ದರು. ವಾಸ್ತು ಪ್ರಕಾರ ಮನೆ ಮತ್ತು ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸುತ್ತಿದ್ದರು. ಮುಂಬೈ, ಬೆಂಗಳೂರು, ಹುಬ್ಬಳ್ಳಿ ಮತ್ತು ಇತರ ನಗರಗಳಲ್ಲಿ ಕಚೇರಿಗಳನ್ನು ಹೊಂದಿರುವ ಗುರೂಜಿ ಅವರ ಸಂಸ್ಥೆಯು ಭಾರಿ ಮೊತ್ತದ ಹಣವನ್ನು ವಹಿವಾಟುಗಳಿಂದ ಗಳಿಸಿದೆ. ಹಲ್ಲೆಕೋರರಲ್ಲಿ ಒಬ್ಬನಾದ ಮಹಾಂತೇಶ್ ಸೇರಿದಂತೆ ಹಲವು ಉದ್ಯೋಗಿಗಳ ಹೆಸರಿನಲ್ಲಿ ಅಪಾರ ಆಸ್ತಿಯನ್ನು ಗುರೂಜಿ ಹೊಂದಿದ್ದರು. ಗುರೂಜಿಯವರ ಹಣಕಾಸು ನೋಡಿಕೊಳ್ಳುತ್ತಿದ್ದ ಮಹಾಂತೇಶ ಶಿರೂರು ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನೋಂದಣಿಯಾಗಿದೆ.

ಸ್ವತ್ತುಗಳನ್ನು ಹಿಂದಿರುಗಿಸಲು ಒತ್ತಾಯ: ಮಹಾಂತೇಶ್ 2016 ರಲ್ಲಿ ಸರಳ ವಾಸ್ತು ಕೆಲಸ ತೊರೆದಿದ್ದ. ನಂತರ, ಗುರೂಜಿ ಶಿರೂರು ಬಳಿ ಆಸ್ತಿಯನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದರು. ಇದು ಕೊಲೆಗೆ ಕಾರಣವಾಗಿದೆ. 2005ರಿಂದ 2019ರವರೆಗೆ ಸರಳ ವಾಸ್ತುವಿನಲ್ಲಿ ಕೆಲಸ ಮಾಡಿದ್ದ ಶಿರೂರು ಅವರ ಪತ್ನಿ ವನಜಾಕ್ಷಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಬಿಡುಗಡೆಮಾಡಿದ್ದರು. 

ನಿನ್ನೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ವನಜಾಕ್ಷಿ, ಗುರೂಜಿ ಒಬ್ಬ ಒಳ್ಳೆಯ ವ್ಯಕ್ತಿ, ನನ್ನ ಪತಿ ಅವರನ್ನು ಕೊಂದು ತಪ್ಪು ಮಾಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ನಮ್ಮ ನಡುವೆ ಯಾವುದೇ ವಿವಾದ ಇರಲಿಲ್ಲ. ನನ್ನ ಗಂಡನ ಹೆಸರಿನಲ್ಲಿರುವ ಗುರೂಜಿ ಆಸ್ತಿ ಬಗ್ಗೆ ನನಗೆ ಗೊತ್ತಿಲ್ಲ. ಕಳೆದ 4-5 ದಿನಗಳಿಂದ ಪತಿ ಮನೆಗೆ ಬಂದಿರಲಿಲ್ಲ. ನಾನು ಅವರನ್ನು ಕೇಳಿದಾಗ, ಬೇರೆ ತುರ್ತು ಕೆಲಸವಿದೆ ಎಂದಿದ್ದರು.

ಈ ಮಧ್ಯೆ ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸೋದರಳಿಯ ಸಂಜಯ್ ಅಂಗಡಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT