ಆರೋಗ್ಯ ಸಚಿವ ಸುಧಾಕರ್ 
ರಾಜ್ಯ

ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಸುಧಾಕರ್‌

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಖಾಯಂ ನೌಕರರಿಗೆ ಕೊಡುವಷ್ಟೇ ವೇತನವನ್ನು ನಮಗೂ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ 49 ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದ ತನಕ ಮಾಡಲಿದೆ. ಹೀಗಾಗಿ ಅವರನ್ನು  ಖಾಯಂ ನೌಕರರನ್ನಾಗಿ ಮಾಡಿಕೊಳ್ಳಲು ಅಡಚಣೆಗಳಿವೆ. ಅಷ್ಟೇ ಅಲ್ಲದೆ, ಖಾಯಂ ನೌಕರರಂತೆ ಸಮಾನ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಈಗಿರುವ ವೇತನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಆರೋಗ್ಯ ವಿಮೆ ವಿಸ್ತರಣೆ, 10 ದಿನಗಳ ವೇತನ ಸಹಿತ ರಜೆಯ ಬೇಡಿಕೆಗಳನ್ನು ಇಟ್ಟಿದ್ದಾರೆ. ಇದಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ. ಪ್ರತಿಭಟನಾ ನಿರತ ನೌಕಕರು ಕೇಳಿರುವ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುವ ಪ್ರಮಾಣಿಕ ಪ್ರಯತ್ನ ಮಾಡಲಿದ್ದೇವೆ. ಸರ್ಕಾರ ಅವರ ಪರವಾಗಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. 
 
ಸರ್ಕಾರಿ ಆರೋಗ್ಯ ವ್ಯವಸ್ಥೆಯ ಬಗ್ಗೆ ಜನರು ಬಹಳ ವಿಶ್ವಾಸ ಇಟ್ಟಿದ್ದಾರೆ. ಕೇವಲ ಮೂಲಭೂತ ಸೌಲಭ್ಯಗಳಿಂದ ಮಾತ್ರ ಜನರಿಗೆ ವಿಶ್ವಾಸ ಬರುವುದಿಲ್ಲ. ಬದಲಾಗಿ ಇಂತಹ ನೌಕರರಿಂದ ಆರೋಗ್ಯ ಸೇವೆಗೆ ಉತ್ತಮ ಹೆಸರು ಬಂದಿದೆ. ಅವರಿಗೆ ನೋವು ಕೊಟ್ಟು ನಾವು ಮುಂದುವರಿಯುವುದು ಅಸಾಧ್ಯ. ಕೆಲವು ಬೇಡಿಕೆ ಈಡೇರಿಸಲು ಕಾನೂನಾತ್ಮಕ, ತಾಂತ್ರಿಕ ತೊಡಕುಗಳಿವೆ. ಇವೆಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಿ, ಸಾಧ್ಯವಿರುವ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ದೇಶದಲ್ಲೇ ಆರೋಗ್ಯ ಸೇವೆ ನೀಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅದಕ್ಕೆ ಪೂರಕವಾಗಿ ಕೆಲಸ ನಡೆಯಬೇಕು. ನೌಕರರು ಮುಷ್ಕರ ಕೈ ಬಿಟ್ಟು ಶೀಘ್ರದಲ್ಲೇ ಸೇವೆಗೆ ಹಿಂದಿರುಗಬೇಕು ಎಂದು ಸಚಿವರು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT