ಕರ್ನಾಟಕ ಲೋಕಾಯುಕ್ತ 
ರಾಜ್ಯ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರ ಸಾವು: ಪ್ರಕರಣದ ತನಿಖೆಗೆ ಲೋಕಾಯುಕ್ತ ಆದೇಶ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎರಡು ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸಾವನ್ನಪ್ಪಿದ್ದು, 40 ಮಂದಿ ಅಸ್ವಸ್ಥಗೊಂಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ಘಟನೆ ಕುರಿತು...

ಬೆಂಗಳೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎರಡು ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸಾವನ್ನಪ್ಪಿದ್ದು, 40 ಮಂದಿ ಅಸ್ವಸ್ಥಗೊಂಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ಘಟನೆ ಕುರಿತು ಸ್ವಯಂಪ್ರೇರಿತ ವಿಚಾರಣೆ ಆರಂಭಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವಿಭಾಗಕ್ಕೆ ಆದೇಶಿಸಿದ್ದಾರೆ. 

ಸಾಮಾಜಿಕ ಕಾರ್ಯಕರ್ತ ಎಚ್‌ಎಂ ವೆಂಕಟೇಶ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಮಾಧ್ಯಮ ವರದಿಯನ್ನು ಲಗತ್ತಿಸಿ, ಘಟನೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಾಯುಕ್ತರಿಗೆ ಇಮೇಲ್ ಮಾಡಿದ್ದರು. . ಈ ಇ-ಮೇಲ್‌ ಸ್ವೀಕರಿಸಿದ ನಂತರ ಲೋಕಾಯುಕ್ತ ಪಾಟೀಲ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಇದುವರೆಗೆ 8 ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಯಲ್ಲಿ ಹೇಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮಾಧ್ಯಮಗಳ ವರದಿ ಪ್ರಕಾರ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ನೀರು ಶುದ್ಧೀಕರಣ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ತುಂಗಭದ್ರಾ ನದಿ ನೀರನ್ನು ಶುದ್ಧೀಕರಿಸದೆ ಸರಬರಾಜು ಮಾಡಿರುವುದು ಜನರ ಆರೋಗ್ಯ ಹದಗೆಡಲು ಪ್ರಮುಖ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT