ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲಾ ಶಿಕ್ಷಣದಿಂದ ವಂಚಿತ!

ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದರೂ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗೆ ಉಳಿದಿದ್ದಾರೆ.

ಬೆಂಗಳೂರು: ಹದಿನಾಲ್ಕು ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದರೂ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗೆ ಉಳಿದಿದ್ದಾರೆ.

10,12,800 ಮಕ್ಕಳು ಶಾಲೆಗಳು ಮತ್ತು ಅಂಗನವಾಡಿಗಳಿಂದ ಹೊರಗುಳಿದಿದ್ದಾರೆ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಬುಧವಾರ ಸಲ್ಲಿಸಿದ ಅಂಕಿಅಂಶಗಳನ್ನು ಬಹಿರಂಗಪಡಿಸಿದೆ. ರಾಜ್ಯಾದ್ಯಂತ ನಡೆಸಿದ ಮೊದಲ ರೀತಿಯ, ಮನೆ-ಮನೆ ಸಮೀಕ್ಷೆಯಲ್ಲಿ ಡೇಟಾ ಸಂಗ್ರಹಿಸಲಾಗಿದೆ.

ನಗರ ಪ್ರದೇಶಗಳಲ್ಲಿ ಶೇ 100ರಷ್ಟು ಸಮೀಕ್ಷೆ ನಡೆಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದಲ್ಲಿ 6ರಿಂದ 14 ವರ್ಷದ 15,338 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದೇ ವಯೋಮಾನದ 10 ಸಾವಿರ ಮಕ್ಕಳು ಶಾಲೆಗಳಲ್ಲಿ ಪ್ರವೇಶಾತಿಯನ್ನೇ ಪಡೆದಿಲ್ಲ. 3 ವರ್ಷದೊಳಗಿನ 4.54 ಲಕ್ಷ ಮಕ್ಕಳು ಹಾಗೂ 4ರಿಂದ 6 ವರ್ಷದ 5.33 ಲಕ್ಷ ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರಲು ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಾಗಿತ್ತು. ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಸಮಗ್ರ ಶಿಕ್ಷಣ ಕರ್ನಾಟಕ (ಎಸ್‌ಎಸ್‌ಕೆ) ಇಲಾಖೆಯು ಗ್ರಾಮೀಣ, ನಗರ ಪ್ರದೇಶಗಳಲ್ಲಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಹೋಲಿಸಿದರೆ, ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ,.

ಗ್ರಾಮೀಣ ಭಾಗದಲ್ಲಿ ಶಾಲೆಗಳಿಂದ ಹೊರಗುಳಿದ ಮಕ್ಕಳ ಬಗ್ಗೆ 2020ರಲ್ಲಿ ಸಮೀಕ್ಷೆ ಆರಂಭಿಸಲಾಗಿತ್ತು. ಬಿಬಿಎಂಪಿ ಸಹಿತ ರಾಜ್ಯದ ಎಲ್ಲ 319 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾರ್ಚ್‌ನಲ್ಲಿ ಸಮೀಕ್ಷೆ ಪೂರ್ಣಗೊಳಿಸ ಲಾಗಿತ್ತು. ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದಲ್ಲಿ ಒಟ್ಟಾರೆ 6ರಿಂದ 14 ವರ್ಷದ 15,338 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ.

ಇದೇ ವಯೋಮಾನದ 10 ಸಾವಿರ ಮಕ್ಕಳು ಶಾಲೆಗೆ ಪ್ರವೇಶವನ್ನೇ ಪಡೆದಿಲ್ಲ. 3 ವರ್ಷದೊಳಗಿನ 4.54 ಲಕ್ಷ ಮಕ್ಕಳು ಹಾಗೂ 4ರಿಂದ 6 ವರ್ಷದ 5.33 ಲಕ್ಷ ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ನೋಂದಾಯಿಸಿಲ್ಲ. ಒಟ್ಟಾರೆ 10.12 ಲಕ್ಷ ಮಕ್ಕಳು ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಂದ ಹೊರಗಿದ್ದಾರೆ ಎಂದು ವರದಿ ತಿಳಿಸಿದೆ.

ಹಿರಿಯ ವಕೀಲರಾದ ಅಮಿಕಸ್ ಕ್ಯೂರಿ, ಕೆಎನ್ ಫಣೀಂದ್ರ ಅವರು ಸಲ್ಲಿಸಿದ ಅಂಕಿಅಂಶಗಳನ್ನು ದಾಖಲಿಸಿಕೊಂಡ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಜುಲೈ 16 ರಂದು ಸಭೆ ಸೇರಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮಸ್ಯೆಯನ್ನು ಪರಿಗಣಿಸುವಂತೆ ಉನ್ನತಾಧಿಕಾರ ಸಮಿತಿಗೆ ಸೂಚಿಸಿತು.

ಪ್ರಾಥಮಿಕವಾಗಿ 6-14 ವರ್ಷ ವಯೋಮಾನದ 'ಎಂದಿಗೂ ಶಾಲೆಗೆ ದಾಖಲಾಗದ' ಅಥವಾ 'ಹೊರಗುಳಿದಿರುವ' ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ ಮತ್ತು ಶಾಲಾ ವ್ಯವಸ್ಥೆಯೊಳಗೆ ಮರಳಿ ತರಲು ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಮಿಕಸ್ ಕ್ಯೂರಿ ತಿಳಿಸಿದ್ದಾರೆ.

ಕೃಷಿ ಕೂಲಿಕಾರರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಆಗಾಗ್ಗೆ ವಲಸೆ ಹೋಗುತ್ತಾರೆ. ಬಡ ಕುಟುಂಬಗಳು ಉದ್ಯೋಗ ಆರಸಿ ಗುಳೆ ಹೊರಡುತ್ತಾರೆ. ಇದರಿಂದಾಗಿ ಮಕ್ಕಳು ಹೊರಗುಳಿಯುತ್ತಾರೆ ಎಂದು ಸಮೀಕ್ಷೆ ನಡೆಸಿದ ಇಲಾಖೆಗಳ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT