ರಾಜ್ಯ

ರಾಜ್ಯದ 48 ಲಕ್ಷ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ 132 ಕೋಟಿ ರೂ. ಮಂಜೂರು: ಮುಖ್ಯಮಂತ್ರಿ ಬೊಮ್ಮಾಯಿ

Nagaraja AB

ಬೆಂಗಳೂರು: ತರಗತಿಗಳು ಆರಂಭವಾಗಿ ಏಳು ವಾರಗಳು ಕಳೆದಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸದೆ ಟೀಕೆಗಳಿಗೆ ಗುರಿಯಾಗಿದ್ದ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಕ್ಷಣವೇ ಪೂರೈಸುವುದಾಗಿ ಶುಕ್ರವಾರ ಪ್ರಕಟಿಸಿದೆ.

ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲು ರೂ. 132 ಕೋಟಿ ಮಂಜೂರು ಮಾಡಲಾಗಿದೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಸುಮಾರು 48 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಹಣ ಮಂಜೂರು ಮಾಡಿದೆ. ಆದರೆ ಅವು ಸಿದ್ಧವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ, ಅವುಗಳನ್ನು ನಂತರ ವಿತರಿಸಲಾಗುವುದು ಯಾವುದೇ ಗೊಂದಲದ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯತೆ ಪೂರೈಸುವಲ್ಲಿ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆದೇಶ ಬಂದಿದೆ. ಈ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. 

ಅಗತ್ಯವಿರುವ ಹಣವನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಮೂಲಕ ಒದಗಿಸಲಾಗುವುದು ಎಂದು ನಾಗೇಶ್ ಶುಕ್ರವಾರ ಹೇಳಿದರು. ಈ ಶೈಕ್ಷಣಿಕ ವರ್ಷದಲ್ಲಿ ಮೇ 16 ರಂದು ಶಾಲೆಗಳು ಪುನರಾರಂಭವಾಗಿದ್ದು, ತಮ್ಮ ವಾರ್ಡ್‌ಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್‌ಗಳನ್ನು ಒದಗಿಸುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಸರ್ಕಾರ ಈ ನಿರ್ಧಾರವನ್ನು ತಡೆಹಿಡಿದಿತ್ತು.

SCROLL FOR NEXT