ರಾಷ್ಟ್ರೀಯ ಹೆದ್ದಾರಿ 66ರ ಚಿತ್ರ 
ರಾಜ್ಯ

ಕಾರವಾರ: ಭಾರೀ ಮಳೆ, ಜಿಲ್ಲೆಯ ಹಲವೆಡೆ ಜಲಾವೃತ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಸ್ಥಳಗಳು ಜಲಾವೃತಗೊಂಡಿವೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯ ಚೆಂಡಿಯೆ ಗ್ರಾಮದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. 

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಸ್ಥಳಗಳು ಜಲಾವೃತಗೊಂಡಿವೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯ ಚೆಂಡಿಯೆ ಗ್ರಾಮದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. 

ಭಾರೀ ಮಳೆಯಿಂದ ಹಲವಾರು ಗ್ರಾಮಗಳು ಸಂಪರ್ಕ ಕಡಿತಗೊಂಡಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕಾರವಾರ ಪಟ್ಟಣ ಹಾಗೂ ಹೊರವಲಯದಲ್ಲಿನ ಹಲವು ಕಾಲುವೆಗಳು, ಜಲಾಶಯಗಳು ತುಂಬಿ ಹರಿಯುತ್ತಿವೆ. ಶೇರವಾಡ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನಗಳು ನೀರಿನಲ್ಲಿಯೇ ಸಂಚರಿಸಿದವು. ಯಾವುದೇ ರೀತಿಯ ಘರ್ಷಣೆ ಸಂಭವಿಸದಂತೆ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿತ್ತು.

ಹೊನ್ನಾವರ ಅರಣ್ಯ ಪ್ರದೇಶದ ಗ್ರಾಮಗಳು ಹೊರ ಜಗತ್ತಿನ ಸಂಪರ್ಕವಿಲ್ಲದೆ ದ್ವೀಪಗಳಾಗಿ ಮಾರ್ಪಟ್ಟಿವೆ. ಅಘನಾಶಿನಿ,  ಗಂಗವಳ್ಳಿ ಮತ್ತು ಕಾಳಿ ನದಿಗಳಲ್ಲಿ ತೀವ್ರ ಒಳಹರಿವಿದೆ. ರಾಷ್ಟ್ರೀಯ ಹೆದ್ದಾರಿ ಜಲಾವೃತದೊಂದಿಗೆ  ಕಾರವಾರ ಬಳಿಯ ಬಿಣಗಾದಲ್ಲಿ ಹೆಚ್ಚಿನ ಸಮಸ್ಯೆ ಕಂಡುಬಂದಿತು. ಆಮೆಗತಿಯ ವಾಹನ ಸಂಚಾರದಿಂದ ಜನರು ಬಹಳ ಹೊತ್ತು ಕಾಯುವಂತಾಯಿತು. 

ಮಳೆಯಿಂದಾಗಿ 100 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, 14 ತೀವ್ರವಾಗಿ ಅಥವಾ ಸಂಪೂರ್ಣವಾಗಿ ಹಾನಿಗೊಳಗಾಗಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಐಎನ್‌ಎಸ್ ಕದಂಬ ನೌಕಾನೆಲೆ ಬಳಿಯಿರುವ ಚೆಂಡಿಯೆ ಗ್ರಾಮದಲ್ಲಿ ಗುರುವಾರ ರಾತ್ರಿ ಮತ್ತು ಶುಕ್ರವಾರದ ಆರಂಭದಲ್ಲಿ 260 ಮಿ.ಮೀ.ನಷ್ಟು ಮಳೆ ಸುರಿದಿದೆ. ಜಿಲ್ಲಾಡಳಿತದಿಂದ ಗುರುವಾರದಿಂದ ಎರಡು ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT