ಬೆಂಗಳೂರು: ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಯಲ್ಲಿ ರಾಬರಿ ನಡೆದಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ ನಡೆದಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಯಲ್ಲಿ ರಾಬರಿ ನಡೆದಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ ನಡೆದಿದೆ.
ಕೆಂಗೇರಿ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ಜ್ಯೋತಿಷಿ ಪ್ರಮೋದ್ ಎಂಬುವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಜ್ಯೋತಿಷ್ಯ ಕೇಳುವ ನೆಪದಲ್ಲಿ ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಮೋದ್ ಮನೆಗೆ ಮೂವರು ಅಪರಿಚಿತರು ಏಕಾಏಕಿ ನುಗ್ಗಿ ಹಲ್ಲೆ ನಡೆಸಿ, 400 ಗ್ರಾಂ ಚಿನ್ನಾಭರಣ ಹಾಗೂ 5 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಪ್ರಮೋದ್ ಮುಖಕ್ಕೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಮೋದ್ ಒಂಟಿಯಾಗಿ ವಾಸಿಸುತ್ತಿರುವ ಮಾಹಿತಿ ತಿಳಿದು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಪ್ರಕರಣ ದಾಖಲಿಸಿ ಕೊಂಡಿರುವ ಕೆಂಗೇರಿ ಠಾಣೆ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.