ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 831 ಸೇರಿ ರಾಜ್ಯದಲ್ಲಿ 942 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,021ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 942 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,021ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40081 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 831 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,12,896ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 737 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,32,000ಕ್ಕೆ ಏರಿಕೆಯಾಗಿದೆ. ಇನ್ನು 6898 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel