ಬೆಂಗಳೂರು: ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸ್ಲಿಂರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸುತ್ತಿದ್ದಾರೆ.
ಹೊಸ ಉಡುಗೆ ತೊಟ್ಟ ಮುಸ್ಲಿಂ ಬೆಳಗ್ಗೆಯೇ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭ ಕೋರಿದರು. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಸಾವಿರಾರು ಮುಸ್ಲಿಂ ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.