ಸಾಂದರ್ಭಿಕ ಚಿತ್ರ 
ರಾಜ್ಯ

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು, ಕಳೆದ ಐದು ತಿಂಗಳಲ್ಲಿ ಐದನೇ ಘಟನೆ

ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆಯೊಬ್ಬರು ಸಾವನ್ನಪಿರುವ ಘಟನೆ ನಾಗರಭಾವಿ ರಸ್ತೆಯಲ್ಲಿ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡ್ರೈವರ್ ಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಸಂಚಾರಿ ಪೊಲೀಸರು ಅರಿವು ಮೂಡಿಸುತ್ತಿದ್ದರೂ ಕಳೆದ ಐದು ತಿಂಗಳಲ್ಲಿ ಸಂಭವಿಸಿರುವ ಐದನೇ ಘಟನೆ ಇದಾಗಿದೆ.

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆಯೊಬ್ಬರು ಸಾವನ್ನಪಿರುವ ಘಟನೆ ನಾಗರಭಾವಿ ರಸ್ತೆಯಲ್ಲಿ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡ್ರೈವರ್ ಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಸಂಚಾರಿ ಪೊಲೀಸರು ಅರಿವು ಮೂಡಿಸುತ್ತಿದ್ದರೂ ಕಳೆದ ಐದು ತಿಂಗಳಲ್ಲಿ ಸಂಭವಿಸಿರುವ ಐದನೇ ಘಟನೆ ಇದಾಗಿದೆ.

ಮೂಡಲಪಾಳ್ಯದ ಭುವನೇಶ್ವರಿ ನಗರದ ವಿಜಯಕಲಾ ಮೃತಪಟ್ಟ ಮಹಿಳೆ. ಆಕೆಯ ಪತಿ ಯೋಗೇಂದ್ರ (41) ಗಾಯಗೊಂಡಿದ್ದಾರೆ. ಚಂದ್ರಲೇಔಟ್ ನಲ್ಲಿ ಎಲೆಕ್ಟ್ರಾನಿಕ್ ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ವಿಜಯಕಲಾ ತನ್ನ ಪತಿಯೊಂದಿಗೆ ಕೆಲಸಕ್ಕೆ ತೆರಳುತ್ತಿದ್ದಾಗ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಮಹಿಳೆ ಬೈಕ್ ನಿಂದ ಬಿದ್ದು, ತೀವ್ರವಾಗಿ ತಲೆಗೆ ಗಾಯವಾಗಿತ್ತು. ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ವಿಜಯಕಲಾ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಯೋಗೇಂದ್ರ ಅವರ ಪರಿಸ್ಥಿತಿ ಸ್ಥಿರವಾಗಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಲಾರಿ ಚಾಲಕನ ವಿರುದ್ಧ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯ ಚಾಲನೆಯ ಕೇಸ್ ದಾಖಲಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT