ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
"ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ". ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.
ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.