ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ನಾಳೆ ಚಾಮರಾಜಪೇಟೆ ಬಂದ್: ಕಮಿಷನರ್ ನೇತೃತ್ವದಲ್ಲಿ ಭಾರೀ ಭದ್ರತೆ- ಆರಗ ಜ್ಞಾನೇಂದ್ರ

ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಈದ್ಗಾ ಮೈದಾನವನ್ನು ವಕ್ಫ್ ಬೋರ್ಡ್ ಗೆ ನೀಡಬಾರದು, ಆಟದ ಮೈದಾನವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕೂಟ ನಾಳೆ ಬಂದ್ ಗೆ ಕರೆ ನೀಡಿದೆ.

ಬೆಂಗಳೂರು: ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಈದ್ಗಾ ಮೈದಾನವನ್ನು ವಕ್ಫ್ ಬೋರ್ಡ್ ಗೆ ನೀಡಬಾರದು, ಆಟದ ಮೈದಾನವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕೂಟ ನಾಳೆ ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಗಡಿ, ಮಳಿಗೆಗಳ ಮುಂದೆ  ಫೋಸ್ಟರ್ ಅಂಟಿಸಿ ಬಂದ್ ಗೆ ಬೆಂಬಲ ನೀಡುವಂತೆ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಚಾಮರಾಜ ಪೇಟೆ ಬಂದ್ ಸಂಬಂಧ ಈಗಾಗಲೇ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಿ, ಬಂದೋಬಸ್ತ್ ಮಾಡಲಾಗಿದೆ. ಕಮಿಷನರ್ ನೇತೃತ್ವದಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.

ಈ ಮಧ್ಯೆ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಳೆ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ನಮ್ಮ ಸಚಿವರು ಹೋಗ್ತಿದ್ದಾರೆ. ನಾನು ಕೂಡಾ ಆಗುಂಬೆ ಬಳಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದ ಸ್ಥಳಕ್ಕೆ ಭೇಟಿ ನೀಡಿ, ಕೂಡಲೇ ದುರಸ್ತಿ ಮಾಡುವಂತೆ ಎಂಜಿನಿಯರ್ ಗಳಿಗೆ ಆದೇಶಿಸಿರುವುದಾಗಿ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!