ಕಾಮಗಾರಿ ಪರಿಶೀಲಿಸಿದ ಎಸ್ ಆರ್ ವಿಶ್ವನಾಥ್ 
ರಾಜ್ಯ

ತಿರುಪತಿಯಲ್ಲಿ 236 ಕೋಟಿ ರೂ. ವೆಚ್ಚದ ವಸತಿ ಕೊಠಡಿಗಳ ಯೋಜನೆ ಶೀರ್ಘವೇ ಪೂರ್ಣ: ಎಸ್ ಆರ್ ವಿಶ್ವನಾಥ್

ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಆದ ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ.

ತಿರುಪತಿ: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಆದ ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ.

ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 'ತಿರುಮಲದಲ್ಲಿ ಕರ್ನಾಟಕದ ಯಾತ್ರಾರ್ತಿಗಳು ಬಂದು ವಾಸ್ತವ್ಯ ಮಾಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮಾರು ಏಳು ಎಕರೆ ಜಾಗ ಕೂಡ ನ್ಯಾಯಾಲಯದಲ್ಲಿತ್ತು. ಅದೆಲ್ಲವನ್ನು ಈಗ ಸರಿಪಡಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಸುಸಜ್ಜಿತ ಕೊಠಡಿಗಳು ಹಾಗೂ ಅಗತ್ಯ ಮೂಲಭೂತಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ' ಎಂದು ತಿಳಿಸಿದರು.

ಕರ್ನಾಟಕ ಭವನ ನವೀಕರಣ ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು 236 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಒಟ್ಟು 346 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವಿಧ ಕಾರಣಗಳಿಂದ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಆಗುತ್ತಿರಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಅನುದಾನ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಮೇಲೆ ನೀಡಿದ ಸಹಕಾರದಿಂದ ಈಗ ಶೀಘ್ರಗತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಅವರು ಇತ್ತೀಚೆಗೆ ತಿರುಮಲಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಹೀಗಾಗಿ ಮುಂದಿನ ಫೆಬ್ರವರಿ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ವಿಶ್ವನಾಥ್ ವಿವರಣೆ ನೀಡಿದರು.

ತಿರುಪತಿಗೆ ನಿತ್ಯ ಲಕ್ಷಾಂತರ ಯಾತ್ರಾರ್ಥಿಗಳು ಬರುತ್ತಿದ್ದು ಇವರ ಪೈಕಿ ರಾಜ್ಯದಿಂದ ಬರುವ ಯಾತ್ರಾರ್ಥಿಗಳಲ್ಲಿ ಸುಮಾರು ಏಕಕಾಲಕ್ಕೆ ಒಂದೂವರೆ ಸಾವಿರಕ್ಕೂ ಹೆಚ್ಚು ಯಾತ್ರಾರ್ತಿಗಳಿಗೆ ರಾಜ್ಯ ಸರ್ಕಾರದಿಂದ ವಸತಿ ಸೌಲಭ್ಯ ಕಲ್ಪಿಸಬಹುದು. ಹೀಗಾಗಿ ರಾಜ್ಯ ಸರ್ಕಾರ ಈಗ ತಕ್ಷಣಕ್ಕೆ 100 ಕೋಟಿ ರೂ ಬಿಡುಗಡೆ ಮಾಡುತ್ತಿದ್ದು ಉಳಿದ ಅನುದಾನವನ್ನು ಹಂತ ಹಂತವಾಗಿ ಕೊಡಲಿದೆ. ಹೀಗಾಗಿ ತಿರುಮಲದಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು. ತಿರುಪತಿ ಬೆಟ್ಟದ ಕೆಳಗೆ ರಾಜ್ಯ ಸರ್ಕಾರದ ಆಸ್ತಿ ಇದೆ. ಅದನ್ನು ಕೂಡ ಅಭಿವೃದ್ಧಿಪಡಿಸಿ ಅದರಿಂದ ಬರುವ ಆದಾಯವನ್ನು ತಿರುಮಲದಲ್ಲಿರುವ ಕರ್ನಾಟಕ ಭವನ ನಿರ್ವಹಣೆಗೆ ಬಳಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ವಿಶ್ವನಾಥ್ ತಿಳಿಸಿದರು.

ಈ ಎಲ್ಲಾ ಕಾಮಗಾರಿಗಳನ್ನು ಮುಜರಾಯಿ ಇಲಾಖೆ ವತಿಯಿಂದ ನಡೆಸಲಾಗುತ್ತಿದ್ದು ಇಲಾಖೆಯಿಂದ ಈಗಾಗಲೇ ಸಾಕಷ್ಟು ಸಹಕಾರ ಸಿಕ್ಕಿದೆ ಇನ್ನೂ ಹೆಚ್ಚಿನ ಸಹಕಾರ ನೀಡಬೇಕೆಂದು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ವಿನಂತಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯಗಳು ಸಿಗಲಿದೆ ಎಂದರು.

ತಿರುಮಲದಲ್ಲಿ ಬೇರೆ ರಾಜ್ಯಗಳು ಹೊಂದಿರುವ ಆಸ್ತಿಗಳಿಗೆ ಹೋಲಿಸಿದರೆ ಕರ್ನಾಟಕ ಅತಿ ಹೆಚ್ಚಿನ ಆಸ್ತಿ ಅಂದರೆ ಸುಮಾರು ಏಳು ಎಕರೆ ಜಾಗ ಹೊಂದಿದೆ ಇದನ್ನು ಯಾತ್ರಾರ್ಥಿಗಳ ಸೌಲಭ್ಯ ಹಾಗೂ ಅನುಕೂಲಕ್ಕೆ ಬಳಸಿಕೊಳ್ಳಬೇಕೆನ್ನುವ ನಿಟ್ಟಿನಲ್ಲಿ ಇನ್ನೂ ಅನೇಕ ಕ್ರಮ ಕೈಗೊಳ್ಳುವ ಆಲೋಚನೆ ಇದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT