ವಿವಿಧ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಿ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಜೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆ ಶೃತಿ ಸೇರಿದಂತೆ 46 ನಿಗಮ, ಮಂಡಳಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿ ಮುಖ್ಯಮಂತ್ರಿ ಆದೇಶಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.