ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ 
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಇಂದು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಇಂದು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್ ಗಳ ಪರಿಶೀಲನೆ ಹಾಗೂ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಸಾಗಿಸಲಾಗಿದೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡುವುದಲ್ಲದೆ, ಸ್ವತಃ ತಪಾಸಣೆ ಸಚಿವರೇ ಜೈಲಿಗೆ ಹೋಗಿ ತಪಾಸಣೆಗೆ ಇಳಿದಿದ್ದಾರೆ.

ತಮ್ಮ ಭೇಟಿಯ ಸಮಯದಲ್ಲಿ, ಕಾರಾಗೃಹದಲ್ಲಿ, ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು ಕೈದಿಗಳ ಜತೆಗೆ ಸಂವಾದ ನಡೆಸಲಿದ್ದಾರೆ. ಭೇಟಿಯ ನಂತರ, ಸಚಿವರು ಸುದ್ದಿಗೋಷ್ಟಿ ನಡೆಸುವ ಸಾಧ್ಯತೆ ಇದೆ.

ಕೈದಿಗಳ ಅಕ್ರಮ ಚಟುವಟಿಕೆ ಹಿನ್ನಲೆಯಲ್ಲಿ ಭೇಟಿ
ಕೈದಿಗಳ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ದಿಢೀರ್ ಭೇಟಿ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಜೈಲು ಸಿಬ್ಬಂದಿ ಜತೆ ತೆರಳಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೈದಿಗಳ ಬ್ಯಾರಕ್‌ಗಳನ್ನು ತಪಾಸಣೆ ನಡೆಸಿದರು. ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಕೈದಿಗಳಿಗೆ ಸೂಚನೆ ನೀಡಿದರು. ಅತಿ ಭದ್ರತಾ ಬ್ಯಾರಕ್ ಗಳಿಗೆ ಭೇಟಿ ನೀಡಿ, ಮಾದಕ ವಸ್ತು ಹಾಗೂ ಮೊಬೈಲ್ ಬಳಕೆ ಕುರಿತು ತಪಾಸಣೆ ಮಾಡಿದರು.

ವೈರಲ್ ಆಗಿದ್ದ ಹರ್ಷ ಕೊಲೆ ಪ್ರಕರಣದ ಆರೋಪಿಗಳ ವಿಡಿಯೋ
ಇನ್ನು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು ಬೆಂಗಳೂರು ಜೈಲಿನಿಂದ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಇದು ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿತ್ತು. ಹರ್ಷನ ಕೊಲೆ ಆರೋಪಿಗಳು ಜೈಲಿನಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ.

ಚಾಮರಾಜಪೇಟೆ ಬಂದ್: ಶಾಂತಿಯುತ ಪ್ರತಿಭಟನೆಗೆ ಅವಕಾಶ
ಇದಕ್ಕೂ ಮುನ್ನ ಈದ್ಗಾ ಮೈದಾನ ವಿವಾದ ಕುರಿತಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಇಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರ್ ಟಿ ನಗರದಲ್ಲಿ ಮಾತನಾಡಿದ ಸಚಿವರು, 'ಚಾಮರಾಜಪೇಟೆಯಲ್ಲಿ ಗೃಹ ಇಲಾಖೆ ವತಿಯಿಂದ ಪೊಲೀಸರು ಎಲ್ಲ ಬಂದೋಬಸ್ತ್ ಮಾಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಯಾರೂ ಕಾನೂನು ಸುವ್ಯವಸ್ಥೆಯನ್ನೆ ಕೈಗೆ ತೆಗೆದುಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

ಬಳಿಕ ಸ್ಥಳಕ್ಕೆ ಭೇಟಿ ನೀಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಚಾಮರಾಜಪೇಟೆಗೆ ಭೇಟಿ ನೀಡಲ್ಲ. ಪೊಲೀಸರು ಇದ್ದಾರೆ ಎಲ್ಲ ರೀತಿಯ ಬಂದೋಬಸ್ತ್ ಮಾಡಿದ್ದಾರೆ. ಅಂತೆಯೇ ಸರ್ಕಾರ ಯಾಕೆ ಬೆಂಬಲ ಕೊಡಬೇಕು ಎಂದು ಪ್ರಶ್ನೆ ಮಾಡಿದ ಅವರು, ಅದು ಜನರ ಆಪೇಕ್ಷೆ, ಬಿಬಿಎಂಪಿ ನಿರ್ಣಯ ಮಾಡುತ್ತೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!