ಲಾಲ್ ಬಾಗ್ ಹೂವಿನ ಪ್ರದರ್ಶನದ ಸಾಂದರ್ಭಿಕ ಚಿತ್ರ 
ರಾಜ್ಯ

ನಟ ದಿವಂಗತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ಆಗಸ್ಟ್ 5ರಿಂದ ಆರಂಭ

ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Independence day flower  show) ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಪುಷ್ಪ ಪ್ರದರ್ಶನ ಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿಯ ಪುಷ್ಪ ಪ್ರದರ್ಶನಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ (Puneet Rajkumar) ಹೆಸರಿನ್ನಿಡಲಾಗುತ್ತಿದೆ. ಪುನೀತ್  ಹೆಸರಿನಲ್ಲಿ ನಡೆಯುತ್ತಿರುವ ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದರು. 

ಪ್ರದರ್ಶನದ ವಿಶೇಷ: ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ. ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆಯಲ್ಲಿ ಆಗಿರುವ ನಷ್ಟದ ಬಗ್ಗೆ ಮಾತನಾಡಿದ ಸಚಿವರು, ಸಂಪೂರ್ಣ ವರದಿ ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಮಾಡುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜತೆಗೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT