ವಿಜಯಪುರ: ಇಬ್ಬರೂ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!
ತಾಯಿಯೊಬ್ಬಳು ತಮ್ಮ ಪುಟ್ಟ ಮಕ್ಕಳನ್ನು ನಿರ್ದಯವಾಗಿ ಬಾವಿಗೆ ತಳ್ಳಿ ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ: ತಾಯಿಯೊಬ್ಬಳು ತಮ್ಮ ಪುಟ್ಟ ಮಕ್ಕಳನ್ನು ನಿರ್ದಯವಾಗಿ ಬಾವಿಗೆ ತಳ್ಳಿ ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.
ಸಿಂದಗಿ ತಾಲೂಕಿನ ಹಂದಿನಗೂರಿನಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿದ ನಂತರ 32 ವರ್ಷದ ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಲ್ವರು ಹೆಣ್ಣುಮಕ್ಕಳ ಪೈಕಿ ಇಬ್ಬರನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 6 ತಿಂಗಳಿನಿಂದ ಅವ್ವಮ್ಮಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಕೌಟುಂಬಿಕ ಸಮಸ್ಯೆ; 3 ಮಕ್ಕಳ ಬಾವಿಗೆ ತಳ್ಳಿ ಕೊಂದ ಪಾಪಿ ತಂದೆ, ಪತ್ನಿ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ!
ಪತಿ ಶ್ರೀಶೈಲ ಗುಬ್ಬೇವಾಡ ಕುರಿ ಕಾಯಲು ತೆರಳಿದ್ದಾಗ ಅವ್ವಮ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾವಿಯಿಂದ ಮೂವರ ಮೃತದೇಹವನ್ನು ಗ್ರಾಮಸ್ಥರು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.