ಸಾಂಕೇತಿಕ ಚಿತ್ರ 
ರಾಜ್ಯ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಮೊನ್ನೆ ಸೋಮವಾರ ರಾತ್ರಿ ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ 27 ವರ್ಷದ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕಾಂತರಾಜು ಅವರ ಕೈಗೆ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ: ಮೊನ್ನೆ ಸೋಮವಾರ ರಾತ್ರಿ ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ 27 ವರ್ಷದ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕಾಂತರಾಜು ಅವರ ಕೈಗೆ ಗಾಯವಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ. 

ಐವರು ಯುವಕರು ಕಾಂತರಾಜು ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಮೂವರನ್ನು ಬಂಧಿಸಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಇತರರಿಗಾಗಿ ಶೋಧ ನಡೆಸಲಾಗುತ್ತಿದೆ. ನಮ್ಮ ಬಳಿ ಇರುವ ಆರಂಭಿಕ ವಿವರಗಳ ಪ್ರಕಾರ, ದಾಳಿಕೋರರು ಬಜರಂಗದಳದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಅವರ ಮೇಲೆ ಕೋಪಗೊಂಡಿದ್ದರು. ನಾವು ತನಿಖೆಯನ್ನು ತೀವ್ರಗೊಳಿಸಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ. 

ಇದೇ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ಸೇರಿದಂತೆ ಬಿಜೆಪಿ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಕಾಂತರಾಜು ಅವರ ಆರೋಗ್ಯ ವಿಚಾರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT