ಸಾಂದರ್ಭಿಕ ಚಿತ್ರ 
ರಾಜ್ಯ

ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಕೊಲೆ: ಬೆಂಗಳೂರಿನಲ್ಲಿ ಗುಟ್ಖಾ ಮಾರಾಟಗಾರನನ್ನು ಕೊಂದ ದಂಪತಿ!

23 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗುಟ್ಕಾ ಮಾರಾಟಗಾರನನ್ನು ಮಹಿಳೆ ತನ್ನ ಪತಿ ಜೊತೆ ಸೇರಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ನಲ್ಲಿ ನಡೆದಿದೆ. 

ಬೆಂಗಳೂರು: 23 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗುಟ್ಕಾ ಮಾರಾಟಗಾರನನ್ನು ಮಹಿಳೆ ತನ್ನ ಪತಿ ಜೊತೆ ಸೇರಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ನಲ್ಲಿ ನಡೆದಿದೆ. 

ದಂಪತಿಗಳು ಗುಟ್ಖಾ ಮಾರಾಟಗಾರನನ್ನು ಕೊಂದು, ಶವವನ್ನು ಸಿಮೆಂಟ್ ಚೀಲದಲ್ಲಿ ಸುತ್ತಿ ಕಸದ ತೊಟ್ಟಿಯ ಬಳಿ ಎಸೆದಿದ್ದಾರೆ. ಕೊಲೆಯನ್ನು ಕಣ್ಣಾರೆ ಕಂಡರೂ ಪೊಲೀಸರಿಗೆ ಮಾಹಿತಿ ನೀಡದ ಆರೋಪದ ಮೇಲೆ ಮೃತನ ಪತ್ನಿಯನ್ನು ಬಂಧಿಸಲಾಗಿದೆ. ಆರೋಪಿ ದಂಪತಿ ಮತ್ತು ಕೊಲೆಯಾದ ವ್ಯಕ್ತಿ ಕುಟುಂಬ ಉತ್ತರ ಭಾರತದವರು.

ಕೊಲೆಯಾದ ವ್ಯಕ್ತಿ ಬಿಹಾರ ಮೂಲದ ಓಂನಾಥ್ ಸಿಂಗ್(48) ಎಂದು ಗುರುತಿಸಲಾಗಿದ್ದು, ಜುಲೈ 5 ರಂದು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳತ್ತೂರಿನ ಕಸದ ತೊಟ್ಟಿಯ ಬಳಿ ಅವರ ಶವ ಪತ್ತೆಯಾಗಿತ್ತು. ಆರೋಪಿಗಳು ಓಂನಾಥ್ ಸಿಂಗ್ ರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಓಂನಾಥ್ ಸಿಂಗ್ ರಸ್ತೆ ಬದಿಯ ಅಂಗಡಿಗಳಿಗೆ ಗುಟ್ಕಾ ಪೂರೈಕೆ ಮಾಡುತ್ತಿದ್ದರು.

ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ವಿಶಾಲ್ ಪ್ರಜಾಪತಿ(24) ಮತ್ತು ಆತನ ಪತ್ನಿ ಎಂದು ಗುರುತಿಸಲಾಗಿದೆ. ಆರೋಪಿಗಳು ಮತ್ತು ಕೊಲೆಯಾದ ವ್ಯಕ್ತಿಯ ಕುಟುಂಬ ಬೆಳತ್ತೂರಿನಲ್ಲಿ ನೆರೆಹೊರೆಯವರಾಗಿದ್ದರು. 

ಓಂನಾಥ್ ಸಿಂಗ್ ಪ್ರಜಾಪತಿಯ ಪತ್ನಿಯ ಮನವೊಲಿಸಿ ಅತ್ಯಾಚಾರ ಎಸಗಿದ್ದು, ಈ ಕೃತ್ಯವನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ. ಬಳಿಕ ಆ ವಿಡಿಯೋ ಬಳಸಿಕೊಂಡು ಆಕೆಗೆ ಬ್ಲಾಕ್‌ಮೇಲ್ ಮಾಡಿ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರ ಸಂತ್ರಸ್ತೆ ಈ ಸಂಬಂಧ ಪೊಲೀಸರಿಗೆ ದೂರು ನೀಡಿಲ್ಲ. ಆದರೆ ವಿಷಯವನ್ನು ತನ್ನ ಪತಿಗೆ ತಿಳಿಸಿದ್ದಾಳೆ. ನಂತರ ದಂಪತಿ ಆತನನ್ನು ಕೊಲ್ಲಲು ಸಂಚು ರೂಪಿಸಿದ್ದರು. ದಂಪತಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾಪತಿ ಸಿಂಗ್ ಅವರಿಂದ 6 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಹಣ ವಾಪಸ್ ಕೊಡಲು ವಿಳಂಬವಾದ ಕಾರಣ ಇಬ್ಬರ ನಡುವೆ ಜಗಳವಾಗಿತ್ತು. ಈ  ಸಂಬಂಧ ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!