ರಾಜ್ಯ

ಕಡಲ್ಕೊರೆತ ತಡೆಗೆ ಹೊಸ ಶಾಶ್ವತ ತಂತ್ರಜ್ಞಾನ, ಭೂಕುಸಿತ-ಭೂಕಂಪನ ಬಗ್ಗೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ: ಸಿಎಂ ಬೊಮ್ಮಾಯಿ

Sumana Upadhyaya

ಉಡುಪಿ: ಕೊಡಗು ಮತ್ತು ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದ ಪ್ರವಾಹ ಉಂಟಾಗಿ ಭೂಕುಸಿತವಾಗಿದ್ದು ಮತ್ತು ಅದರ ಜೊತೆಗೆ ಭೂಕಂಪವಾಗಿರುವ ಘಟನೆಗಳಿಗೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರಾವಳಿಯ ಮಂಗಳೂರು, ಉಡುಪಿಯ ಸಮುದ್ರ ಕಿನಾರೆಗಳಲ್ಲಿ ಕಡಲ್ಕೊರೆತ ತಡೆಗೆ ಹೊಸ ತಂತ್ರಜ್ಞಾನ ಅಳವಡಿಸುವ ಬಗ್ಗೆ ತೀರ್ಮಾನ ಮಾಡಿದ್ದೇವೆ. ಇಂದು ಉಡುಪಿಯಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿ ತುರ್ತಾಗಿ ಹಾಗೂ ದೀರ್ಘಕಾಲೀನವಾಗಿ ಮಾಡಬೇಕಾಗಿರುವ ಕೆಲಸಗಳ ಕುರಿತು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಕಾಪು, ಮರವಂತೆ, ಮೂಲ್ಕಿಗಳಿಗೆ ಭೇಟಿ ನೀಡಿ ಇಲ್ಲಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿ, ಹಣಕಾಸು ವ್ಯವಸ್ಥೆಯನ್ನು ಮಾಡಿ ಬೆಂಗಳೂರಿಗೆ ಹಿಂತಿರುಗುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನಿಸಲಾಗಿದೆ ಎಂದರು. ನಿನ್ನೆ ಸಮುದ್ರ ಕಿನಾರೆಯಲ್ಲಿ ಪರಿಶೀಲನೆ ನಡೆಸಿದ್ದ ಸಿಎಂ ಬೊಮ್ಮಾಯಿ ಕಡಲ್ಕೊರೆತ ತಡೆಗೆ ಹೊಸ ವಿಧಾನದಲ್ಲಿ ಸೀ ವೇವ್ ಬ್ರೇಕರ್ ತಂತ್ರಜ್ಞಾನ ಬಳಸಿ ಶಾಶ್ವತ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. 

SCROLL FOR NEXT