ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 871 ಸೇರಿ 977 ಮಂದಿಗೆ ಪಾಸಿಟಿವ್; ಒಬ್ಬರು ಸಾವು

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 977 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,984,002ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,085ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 871 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,817,412ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,013 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,937,173ಕ್ಕೆ ಏರಿಕೆಯಾಗಿದೆ. ಇನ್ನು 6,702 ಸಕ್ರಿಯ ಪ್ರಕರಣಗಳಿವೆ.

SCROLL FOR NEXT