ರಾಜ್ಯ

ಪಿಎಸ್‌ಐ ನೇಮಕಾತಿ ಹಗರಣದ ನ್ಯಾಯಯುತ ತನಿಖೆಯನ್ನು ನಾವು ನಿರೀಕ್ಷಿಸಬಹುದೇ?: ಕರ್ನಾಟಕ ಹೈಕೋರ್ಟ್ ಪ್ರಶ್ನೆ

Shilpa D

ಬೆಂಗಳೂರು: ಪಿಎಸ್​ಐ ನೇಮಕಾತಿ  ಹಗರಣಕ್ಕೆ  ಸಂಬಂಧಿಸಿದಂತೆ ಹೈಕೋರ್ಟ್​  ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಪ್ರಕರಣದ ತನಿಖೆ ನಡೆಸುತ್ತಿರುವಅಧಿಕಾರಿಗಳಿಂದ ನ್ಯಾಯಯುತ ತನಿಖೆಯನ್ನು ಹೇಗೆ ನಿರೀಕ್ಷಿಸಬಹುದು? ಎಡಿಜಿಪಿ ಅಮೃತ್ ಪಾಲ್ ಅವರಿಗಿಂತ ಕೆಳಗಿರುವವರು  ಉನ್ನತ ಅಧಿಕಾರಿಗೆ ಹೆದರುವುದಿಲ್ಲವೇ? ಎಂಬ ಪ್ರಶ್ನೆ ಮುಂದಿಟ್ಟಿದೆ.

ಅಕ್ರಮ ನೇಮಕಾತಿ ಸಮಾಜಕ್ಕೇ ಬಹು ದೊಡ್ಡ ಬೆದರಿಕೆಯಾಗಿದೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ ಎಂದು  ನ್ಯಾ.ಹೆಚ್.ಪಿ.ಸಂದೇಶ್ ಅಸಮಾಧಾನವ್ಯಕ್ತಪಡಿಸಿದ್ದಾರೆ.

ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ, ಪಿಎಸ್​ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ‌ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಆಡಳಿತದ ಚುಕ್ಕಾಣಿ ಹಿಡಿದಿದ್ದ ಎಡಿಜಿಪಿ ತಮ್ಮ ಸುಪರ್ದಿಯಲ್ಲಿದ್ದ ಉತ್ತರ ಪತ್ರಿಕೆಗಳನ್ನು ತಿದ್ದುವ ಕಾರ್ಯದಲ್ಲಿ ತೊಡಗಿದ್ದರು. ತನ್ನ ಶ್ರೇಣಿಗಿಂತ ಕೆಳಗಿನ ಅಧಿಕಾರಿಗಳ ಕೈಯಲ್ಲಿ ನ್ಯಾಯಯುತ ತನಿಖೆಯನ್ನು ಹೇಗೆ ಈ ನ್ಯಾಯಾಲಯವು ನಿರೀಕ್ಷಿಸಬಹುದು? ಎಂಬ ಪ್ರಶ್ನೆ ಎತ್ತಿದ್ದಾರೆ.

ಕಳೆದ 10 ದಿನಗಳಲ್ಲಿ ಅಮೃತ್ ಪಾಲ್ ಅವರ ಹೇಳಿಕೆಯನ್ನು ಏಕೆ ದಾಖಲಿಸಲಾಗಿಲ್ಲ, ತನಿಖೆಯಲ್ಲಿ  ಏಕೆ ಯಾವುದೇ ಪ್ರಗತಿಯಿಲ್ಲ ಎಂದು ಎಸ್‌ಪಿಪಿಯನ್ನು ಪ್ರಶ್ನಿಸಿದ ನ್ಯಾಯಾಲಯ, “ನೀವು ತನಿಖೆಯನ್ನು ಸರಿಯಾದ ರೀತಿಯಲ್ಲಿ ತೆಗೆದುಕೊಳ್ಳುತ್ತಿಲ್ಲ ಎಂದು ಇದು ತೋರಿಸುತ್ತದೆ ಎಂದು ಕಿಡಿ ಕಾರಿದೆ. ನ್ಯಾಯಾಲಯ ಕಣ್ಣು ಮುಚ್ಚಿ ಕುಳಿತಿದೆಯಾ? ಸಿಐಡಿ ಪೊಲೀಸ್ ಮಹಾನಿರ್ದೇಶಕರನ್ನು ಕರೆಸುವಂತೆ ಕೋರ್ಟ್ ಸೂಚಿಸಲು ನೀವು ಬಯಸುತ್ತೀರಾ ಎಂದು ತಪರಾಕಿ ಹಾಕಿದೆ.

ಅಕ್ರಮ ನೇಮಕಾತಿ ಸಮಾಜಕ್ಕೇ ಬಹುದೊಡ್ಡ ಬೆದರಿಕೆಯಾಗಿದೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ ಎಂದು ಪ್ರಶ್ನಿಸಿದ್ದಾರೆ. ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ, ಪಿಎಸ್​ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ‌ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಎಡಿಜಿಪಿ ಮನೆಯನ್ನು ಶೋಧಿಸಲಾಗಿದೆ, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕಾಲ್ ಡೇಟಾ ರೆಕಾರ್ಡ್ (ಸಿಡಿಆರ್) ವಿಶ್ಲೇಷಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ಇನ್ನೂ ಮೂರು ದಿನ ಪೊಲೀಸ್ ಕಸ್ಟಡಿಗೆ ಕೋರಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಲ್ಲಿ ಯಾವುದೇ ಆತಂಕ ಅಥವಾ ಭಯವಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಆರೋಪಿಗಳ ಕರೆ ವಿವರವನ್ನು ಪರಿಶೀಲಿಸಲಾಗುತ್ತಿದೆ, ಸಿಐಡಿ ಡಿಜಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ನಿರ್ಲಜ್ಜ ವ್ಯಕ್ತಿಗಳಿಂದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಹೀಗಾಗಿ ಜಾಮೀನು ನೀಡದಂತೆ ಎಸ್​ಪಿಪಿ ವಿ.ಎಸ್.ಹೆಗ್ಡೆ ಮನವಿ ಮಾಡಿದ್ದಾರೆ.

SCROLL FOR NEXT