ಸಿಎಂ ಬೊಮ್ಮಾಯಿ 
ರಾಜ್ಯ

ಡಿಸಿಗಳ ಜತೆ ಸಿಎಂ ವಿಡಿಯೋ ಕಾನ್ಫರೆನ್ಸ್: ಮೂಲಭೂತ ಸೌಕರ್ಯ ಕಾಮಗಾರಿಗೆ 500 ಕೋಟಿ ರೂ. ಬಿಡುಗಡೆಗೆ ಆದೇಶ

ಮೂಲಭೂತ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂಪಾಯಿ ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಮೂಲಭೂತ ಸೌಕರ್ಯ ಮರುಸ್ಥಾಪಿಸುವ ಕಾಮಗಾರಿಗೆ 500 ಕೋಟಿ ರೂಪಾಯಿ ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೆಲ ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡು ಪರಿಸ್ಥಿತಿ ಅರಿತಿದ್ದೇನೆ. ತ್ವರಿತ ಗತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಯಥಾಸ್ಥಿತಿಗೆ ತರಬೇಕಾಗಿದೆ. ಇದಕ್ಕಾಗಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಲವಾರು ಜಿಲ್ಲೆಗಳಲ್ಲಿ ಸಮಸ್ಯೆಯಾಗಿದೆ. ಮೂಲಭೂತ ಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ, ಅಂಗನವಾಡಿ, ವಿದ್ಯುತ್ ಕಂಬ, ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡಗಳು ಹಾನಿಗೆ ಒಳಗಾಗಿವೆ. ಈ ಹಾನಿಯನ್ನು ಜಿಲ್ಲಾಧಿಕಾರಿಗಳು ವರದಿ ಮಾಡಿದ್ದಾರೆ. ಇದಕ್ಕಾಗಿ ಕೂಡಲೇ 500 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಮನೆಗಳಿಗೆ ತುರ್ತು ಪರಿಹಾರವಾಗಿ 10 ಸಾವಿರರ ರೂ.ಗಳನ್ನು ನೀಡಿ, ನಂತರ ಮನೆಗಳ ನಿರ್ಮಾಣವನ್ನು ಕೂಡಲೇ ಕೈಗೊಳ್ಳಬೇಕು. ರಸ್ತೆ, ಸೇತುವೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಮಹಾರಾಷ್ಟ್ರದ ಕೋಯ್ನಾ ಜಲಾಶಯಗಳಿಂದ ನೀರಿನ ಮಟ್ಟದ ಬಗ್ಗೆ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಬೇಕು. ಜಲಾಶಯಗಳಿಂದ ನೀರು ಹೊರಬಿಡುವ ಮುನ್ನ ಗ್ರಾಮಗಳಿಗೆ ಎಚ್ಚರಿಕೆ ನೀಡಿ ಜೀವ ಹಾನಿ ಅಥವಾ ಮನೆಗಳಿಗೆ ತೊಂದರೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು. ಜನರ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದರು.

ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹಾನಿಗೊಳಗಾಗಿರುವ ಮನೆಗಳ ನಿರ್ಮಾಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳುವುದು, ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಒದಗಿಸಬೇಕು, ಬೆಳೆ ಹಾನಿ, ರಸ್ತೆ, ಮನೆಗಳ ಹಾನಿ ಬಗ್ಗೆ ಸಮೀಕ್ಷೆ ಸರಿಯಾಗಿ ಆಗಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಜಿಲ್ಲಾಡಳಿತಕ್ಕೆ ನೀಡಿರುವ ಇತರೆ ಸೂಚನೆಗಳು
* ಜಿಲ್ಲೆಗಳಲ್ಲಿ ಮುಂದಿನ 5-6 ದಿನಗಳ ಕಾಲ ಮಳೆ ಹಾಗೂ ಮಳೆ ಮುನ್ಸೂಚನೆಯನ್ನು ಗಮನಿಸುವುದು. ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕು

* ಪರಿಹಾರ ಕಾರ್ಯಗಳು ತ್ವರಿತ ಹಾಗೂ ಪಾರದರ್ಶಕ ವಾಗಿರಬೇಕು

* ರಸ್ತೆ ಸಂಪರ್ಕ, ವಿದ್ಯುತ್ ಕಂಬಗಳು ಹಾಗೂ ಕುಡಿಯುವ ನೀರಿನ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳವುದು

* ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು

* ಭೂಕುಸಿತದ ಸಾಧ್ಯತೆಗಳುಳ್ಳ ಪ್ರದೇಶಗಳಲ್ಲಿ ರಸ್ತೆಗಳನ್ನು ತೆರವುಗೊಳಿಸುವುದು ಹಾಗೂ ದುರ್ಬಲ ಪ್ರದೇಶಗಳ ಸಮೀಕ್ಷೆ ಕಾರ್ಯ ಕೈಗೊಳ್ಳಲು ತಂಡಗಳನ್ನು ನಿಯೋಜಿಸುವುದು ಹಾಗೂ ಕೂಡಲೇ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಕ್ಕೆ ಕ್ರಮ ವಹಿಸುವುದು.

* ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸುವುದು. ಸಮಿತಿಯು ಸಮೀಕ್ಷೆ ಕೈಗೊಂಡು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

* ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ನಿಯಂತ್ರಣಾ ಕೊಠಡಿಗಳು ಭಾರಿ ಮಳೆ ಹಾಗೂ ಪ್ರವಾಹ ಸ್ಥಿತಿಯ ಕುರಿತ ಅಹವಾಲುಗಳಿಗೆ ಸ್ಪಂದಿಸುವುದು

* ಎನ್. ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್ ತಂಡಗಳಿಗೆ ಅಗತ್ಯವಿರುವ ಲಾಜಿಸ್ಟಿಕ್ಸ್ ನೆರವನ್ನು ಒದಗಿಸಿ ತೊಂದರೆಗೀಡಾದ ಪ್ರದೇಶಗಳಿಗೆ ತಕ್ಷಣವೇ ತಲುಪಲು ಕ್ರಮ ವಹಿಸಬೇಕು. ಜಿಲ್ಲಾ ರಕ್ಷಣಾಧಿಕಾರಿಗಳು ಮೇಲ್ವಿಚಾರಣೆ ಕೈಗೊಳ್ಳಬೇಕು.

* ಸಂಬಂಧಿಕರ ಮನೆಗಳಿಗೆ ತೆರಳಿರುವ ಸಂತ್ರಸ್ತರಿಗೆ ಪಡಿತರ ಕಿಟ್ ನ್ನು ಕಂದಾಯ ಇಲಾಖೆ ನೀಡುವ ಪಟ್ಟಿಯಂತೆ ಒದಗಿಸುವುದು.

*ವಿದ್ಯುತ್ ಸಂಪರ್ಕ ಪುನಸ್ಥಾಪಿಸಲು ಅತಿ ಹೆಚ್ಚಿನ ಆದ್ಯತೆ ನೀಡಿ ಬಾಧಿತ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಶ್ರಮವಹಿಸಬೇಕು.

* ಜಿಲ್ಲಾಡಳಿತದ ವತಿಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ಕಲ್ವರ್ಟ್ ಹಾಗೂ ಟ್ಯಾಂಕ್ ಬಂಡ್ ಗಳನ್ನು ತಾತ್ಕಾಲಿಕವಾಗಿ ತಕ್ಷಣವೇ ಸರಿಪಡಿಸಿ, ಶಾಶ್ವತ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದು.

* ಪ್ರಕೃತಿ ವಿಕೋಪ ಪರಿಹಾರದಡಿ ಕೈಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು. ಕಳೆದ ಮೂರು ವರ್ಷಗಳ ಅವಧಿಯ ಮನೆಗಳ ನಿರ್ಮಾಣ ಕಾರ್ಯ ಹಾಗೂ ಅವುಗಳನ್ನು ಪೂರ್ಣಗೊಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಸುವುದು.

* ಬೆಳೆ ಹಾನಿ ಕುರಿತು ತನಿಖೆ ಕೈಗೊಂಡು ಒಂದು ತಿಂಗಳೊಳಗೆ ಇನ್ ಪುಟ್ ಸಬ್ಸಿಡಿ ವಿತರಿಸಬೇಕು

* ಕಾಳಜಿ ಕೇಂದ್ರಗಳಲ್ಲಿರುವ ಸಂತ್ರಸ್ತರಿಗೆ ಸರ್ಕಾರಿ ಆದೇಶದಲ್ಲಿ ನೀಡಿರುವ ಆಹಾರ ಪಟ್ಟಿಯನ್ನು ಅನುಸರಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT