ರೈತರು ಸಾಂದರ್ಭಿಕ ಚಿತ್ರ 
ರಾಜ್ಯ

ಉಕ್ರೇನ್ ಯುದ್ಧದ ಪರಿಣಾಮ: ಭಾರತಕ್ಕೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ

ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಭಾರತಕ್ಕೆ ಪೂರೈಕೆಯಾಗುತ್ತಿರುವ ರಸಗೊಬ್ಬರ ಪೂರೈಕೆ ಮೇಲೆ ಹೊಡೆತ ಬಿದ್ದಿದ್ದು, ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ.

ಬೆಂಗಳೂರು: ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಭಾರತಕ್ಕೆ ಪೂರೈಕೆಯಾಗುತ್ತಿರುವ ರಸಗೊಬ್ಬರ ಪೂರೈಕೆ ಮೇಲೆ ಹೊಡೆತ ಬಿದ್ದಿದ್ದು, ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಭಾರತಕ್ಕೆ ಪೂರೈಕೆಯಾಗುತ್ತಿರುವ ರಸಗೊಬ್ಬರ ಪೂರೈಕೆ ಮೇಲೆ ಹೊಡೆತ ಬಿದ್ದಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ. ರೈತರಿಗೆ ಇದರಿಂದ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

“ಸಾರಜನಕ, ರಂಜಕ ಮತ್ತು ಪೊಟ್ಯಾಸಿಯಮ್ ಯೂರಿಯಾ ಗೊಬ್ಬರದೊಂದಿಗೆ ಡೈಅಮೋನಿಯಂ ಫಾಸ್ಫೇಟ್ ಸೇರಿದಂತೆ ರಷ್ಯಾ ಮತ್ತು ಉಕ್ರೇನ್‌ನಲ್ಲಿ ಲಭ್ಯವಿರುವ ಕಚ್ಚಾ ವಸ್ತುಗಳನ್ನು ತರಲು ತೊಂದರೆ ಇದೆ. ಚೀನಾ ತನ್ನ ರಸಗೊಬ್ಬರಗಳ ಉತ್ಪಾದನೆಯನ್ನು ಕಡಿಮೆ ಮಾಡಿದೆ. ಯೂರಿಯಾ ಮತ್ತು ಕಾಂಪ್ಲೆಕ್ಸ್ ಗೊಬ್ಬರದ ಬೆಲೆ ಹೆಚ್ಚಾಗಿದೆ. ಆದರೆ, ರೈತರಿಗೆ ಬಿಕ್ಕಟ್ಟಿನಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಮಗೆ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು. 

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆಗಳು ರೈತರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು, ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಹೊರತಾಗಿಯೂ ಡಿಎಪಿ, ಎನ್‌ಪಿಕೆ ಮತ್ತು ಯೂರಿಯಾ ರಸಗೊಬ್ಬರಗಳ ಬೆಲೆಯನ್ನು ಬದಲಾಯಿಸಲಾಗಿಲ್ಲ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ, ರಾಜ್ಯ ಕೃಷಿ ಮತ್ತು ತೋಟಗಾರಿಕೆ ಸಚಿವರ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಮಾಂಡವೀಯ ಅವರು, ಆಮದು ಮಾಡಿಕೊಳ್ಳುವ ರಸಗೊಬ್ಬರಗಳಿಗೆ ಬದಲಿಯಾಗಿ ಭಾರತದಲ್ಲಿ ಅಭಿವೃದ್ಧಿಪಡಿಸಿದ ನ್ಯಾನೋ ಗೊಬ್ಬರವನ್ನು ಜನಪ್ರಿಯಗೊಳಿಸುವಂತೆ ಎಲ್ಲಾ ಸರ್ಕಾರಗಳಿಗೆ ಮನವಿ ಮಾಡಿದರು.

ರಸಗೊಬ್ಬರ ಸಬ್ಸಿಡಿಗೆ 2.5 ಲಕ್ಷ ಕೋಟಿ ಖರ್ಚು: ಸಚಿವ
ಭಾರತದ ರಸಗೊಬ್ಬರ ಬಳಕೆಯು ವಿಶ್ವದ ಒಟ್ಟು ರಸಗೊಬ್ಬರ ಬಳಕೆಯ ಶೇಕಡಾ 35 ರಷ್ಟಿದೆ. ನಾವು 70 ಲಕ್ಷ ಮೆಟ್ರಿಕ್ ಟನ್‌ಗಳಿಂದ 100 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಗಳನ್ನು ಆಮದು ಮಾಡಿಕೊಳ್ಳುತ್ತೇವೆ ಅದನ್ನು ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ. ನಾವು ರಸಗೊಬ್ಬರಗಳ ಸಬ್ಸಿಡಿಗಾಗಿ 2.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಇದೇ ವೇಳೆ ನ್ಯಾನೊ ಗೊಬ್ಬರದ ಕುರಿತು ಮಾಂಡವಿಯಾ ಅವರು, “ಪ್ರತಿ ಬಾಟಲಿಯ ಬೆಲೆ 240 ರೂ ಮತ್ತು ಒಂದು ಚೀಲ ಯೂರಿಯಾಕ್ಕೆ ಸಮಾನವಾಗಿರುತ್ತದೆ. ಇದು ತುಂಬಾ ಪರಿಣಾಮಕಾರಿಯಾಗಿದೆ ಮತ್ತು 'ಆತ್ಮನಿರ್ಭರ್ ಭಾರತ್' ಕಡೆಗೆ ಒಂದು ಹೆಜ್ಜೆಯಾಗಿ ಜನಪ್ರಿಯಗೊಳಿಸಬೇಕಾಗಿದೆ. 2025ರ ವೇಳೆಗೆ ದೇಶದಲ್ಲಿ ಒಂಬತ್ತು ನ್ಯಾನೊ ಗೊಬ್ಬರ ಘಟಕಗಳನ್ನು ಸ್ಥಾಪಿಸಲಾಗುವುದು, ಇದು ಎರಡು ಲಕ್ಷ ಮೆಟ್ರಿಕ್ ಟನ್ ರಾಸಾಯನಿಕ ಗೊಬ್ಬರಗಳನ್ನು ಬದಲಿಸುವ ನಿರೀಕ್ಷೆಯಿದೆ. ನಾವು ಭಾರತೀಯ ಜನ ಉರ್ವರಕ್ ಯೋಜನೆಯಡಿ ಒಂದು ರಾಷ್ಟ್ರ-ಒಂದು ಗೊಬ್ಬರವನ್ನು ಸಾಧಿಸಲು ಬಯಸುತ್ತೇವೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT