ರಾಜ್ಯ

ಹಿರಿಯ ನಟ ಅನಂತ್‌ನಾಗ್‌, ಸೇರಿದಂತೆ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್‌

Shilpa D

ಬೆಂಗಳೂರು: ಬರೋಬ್ಬರಿ ಐದು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ, 300ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲಿದೆ.

ನಟ ಅನಂತ್‌ನಾಗ್ ಅವರ ಜೊತೆಗೆ ಶಹನಾಯಿ ವಾದಕ ಪಂಡಿತ್‌ ಬಾಳೇಶ ಭಜಂತ್ರಿ ಹಾಗೂ ಎಂಜಿನಿಯರ್ ಶರದ್‌ ಶರ್ಮ ಗೌರವ ಡಾಕ್ಟರೇಟ್‌ ಪ್ರಕಟಿಸಿದೆ. ನಗರ ಹೊರವಲಯದ ನಂದಿನಿ ಪ್ಯಾಲೇಸ್‍ನಲ್ಲಿ ಶುಕ್ರವಾರ (ಜುಲೈ 15) ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಗೌರವ ಡಾಕ್ಟರೇಟ್‌ ಹಾಗೂ ಪದವಿ ಪ್ರದಾನ ಮಾಡಲಿದ್ದಾರೆ’ ಎಂದು ವಿಶ್ವವಿದ್ಯಾಲಯ ಕುಲಪತಿ ಪ್ರೊ.ನಿರಂಜನ ವಾನಳ್ಳಿ ತಿಳಿಸಿದರು.

‘ಬಾಳೇಶ ಭಜಂತ್ರಿ ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದವರು. ಐದು ದಶಕಗಳಿಂದ ವಿವಿಧ ಭಾಷೆಗಳ 50 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಶಹನಾಯಿ ಸಂಯೋಜನೆ ನೀಡಿದ್ದಾರೆ. ಉಸ್ತಾದ್‌ ಬಿಸ್ಮಿಲ್ಲಾ ಖಾನ್ ಬಳಿ ಅಭ್ಯಾಸ ಮಾಡಿ 40 ವರ್ಷ ಅವರ ಜೊತೆ ಶಹನಾಯಿ ನುಡಿಸಿದ್ದಾರೆ. ಈಚೆಗೆ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದರು’ ಎಂದರು.

‘ಬೆಂಗಳೂರಿನ ಅನಂತ್‌ನಾಗ್‌ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದು, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಹೆಸರು ಮಾಡಿದ್ದಾರೆ. ರಾಜ್ಯದ ಸಾಂಸ್ಕೃತಿಕ ರಂಗಕ್ಕೆ ಅವರ ಕೊಡುಗೆ ಪರಿಗಣಿಸಿ ಗೌರವ ಡಾಕ್ಟರೇಟ್‌ ನೀಡುತ್ತಿದ್ದೇವೆ’ ಎಂದು ಹೇಳಿದರು.

SCROLL FOR NEXT