ಈದ್ಗಾ ಮೈದಾನ 
ರಾಜ್ಯ

ಈದ್ಗಾ ಮೈದಾನಕ್ಕೆ ಚಾಮರಾಜೇಂದ್ರ ಒಡೆಯರ್ ಹೆಸರಿಡಿ: ಸಂಸದ ಪಿ.ಸಿ.ಮೋಹನ್

ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ  ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ. 

ಬೆಂಗಳೂರು: ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಬಂದ್‌ನ ಎರಡು ದಿನಗಳ ನಂತರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ. 

ಮೈದಾನದಲ್ಲಿ ಸ್ವಾತಂತ್ರ ದಿನಾಚರಣೆ, ಅಂಬೇಡ್ಕರ್ ಜಯಂತಿ, ರಾಜ್ಯೋತ್ಸವ ಮತ್ತಿತರ ಸರ್ಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು. ಮೈದಾನದಲ್ಲಿ ಹಿಂದೂ ಹಬ್ಬಗಳನ್ನು ಆಚರಿಸಲು ಅನುಮತಿ ಅಗತ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು.

ಜುಲೈ 12 ರಂದು ಚಾಮರಾಜಪೇಟೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಂದ್ ಯಶಸ್ವಿಯಾಗಿದೆ. ಈದ್ಗಾ ಮೈದಾನ ಆಟದ ಮೈದಾನವಾಗಿ ಉಳಿಯಲಿದ್ದು, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದರು.

ಬಿಬಿಎಂಪಿ ಅನುಮತಿ ನಿರಾಕರಿಸಿದರೆ ಅದು ದೇಶಕ್ಕೆ ಮಾಡಿದ ದೊಡ್ಡ ಅವಮಾನವಾಗುತ್ತದೆ ಎಂದರು. ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸುವುದಿಲ್ಲ ಆದರೆ ಹಿಂದೂ ಹಬ್ಬಗಳನ್ನು ಸಹ ನಡೆಸಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್