ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ 
ರಾಜ್ಯ

ಗಣ್ಯರಿಗೆ ಕೊಲ್ಲುವ ಬೆದರಿಕೆ ಸಂದೇಶ: ಪೋಲೀಸರಿಂದ ತೀವ್ರ ತನಿಖೆ

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ..

ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಾಸಕರಾದ, ಗೂಳಿಹಟ್ಟಿ ಡಿ.ಶೇಖರ್ ಹಾಗೂ ಎಂ.ಚಂದ್ರಪ್ಪ ಅವರಿಗೆ ಬಂದಿರುವ ಬೆದರಿಕೆ ಕರೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಚಿತ್ರದುರ್ಗ ಎಸ್ ಪಿ ಕೆ. ಪರಶುರಾಮ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಕರ್ನಾಟಕ ರಾಜ್ಯ ಪೊಲೀಸ್‌ (ಕೆಎಸ್‌ಪಿ) ಆ್ಯಪ್‌ ಮೂಲಕ ಚಿತ್ರದುರ್ಗ ಪೊಲೀಸರಿಗೆ ಸಂದೇಶ ಬಂದಿದೆ. ಭೋವಿ ಸಮುದಾಯಕ್ಕೆ ಸೇರಿದ ಹಲವು ಮುಖಂಡರು ಹಾಗೂ ಅವರ ಕುಟುಂಬ ಅಪಾಯದಲ್ಲಿದೆ ಎಂದು ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರಿಗೆ ಭದ್ರತೆ ನೀಡುವಂತೆ ಕೋರಿ ಭೋವಿ ಗುರುಪೀಠ, ಪೊಲೀಸರನ್ನು ಕೋರಿಕೊಂಡಿದೆ. ಮಠದ ಆಸ್ತಿ ಹಾಗೂ ಸ್ವಾಮೀಜಿಗೆ ದುಷ್ಕರ್ಮಿಗಳಿಂದ ಅಪಾಯ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ. ಘಟನೆ ಕುರಿತು ಹೊಳಲ್ಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT