ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆ ಪ್ರಾರಂಭ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ಇಂದು 799 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,19,445ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 670 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,38,620ಕ್ಕೆ ಏರಿಕೆಯಾಗಿದೆ. ಇನ್ನು 7,569 ಸಕ್ರಿಯ ಪ್ರಕರಣಗಳಿವೆ.