ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆ!
ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.
ಆಗಸ್ಟ್ 11ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನ. ಈ ಕುರಿತು ಭಾರತ ಚುನಾವಣೆ ಆಯೋಗ ಸೋಮವಾರ ಪ್ರಕಟಣೆ ಹೊರಡಿಸಿದೆ. ಆಗಸ್ಟ್4 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ಆಗಸ್ಟ್ 11ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಏಣಿಕೆ ನಡೆಯಲಿದೆ. ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು ಬಿಜೆಪಿಗೆ ಸ್ಥಾನ ಲಭಿಸಲಿರುವ ಸಾಧ್ಯತೆಯಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.