ಅಪಘಾತದಲ್ಲಿ ನುಜ್ಜು ಗುಜ್ಜಾದ ಕಾರು 
ರಾಜ್ಯ

ರಾಯಚೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವು

ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ...

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಭೀಕರ ಅಪಘಾತದಲ್ಲಿ ಸಾವಿಗೀಡಾದವರು ಆಂಧ್ರಪ್ರದೇಶ ಮೂಲದ ದೀಪ್(35), ಪೂರ್ಣಿಮಾ(30), ಜಶಿನ್(12) ಹಾಗೂ ಮಾಹಿನ್(7) ಎಂದು ಗುರುತಿಸಲಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಸಿಂಧನೂರು ಮಾರ್ಗವಾಗಿ ಹೈದ್ರಾಬಾದ್ ಗೆ ತೆರಳುತ್ತಿದ್ದ ಕುಟುಂಬ ದುರಂತ ಸಾವಿಗೀಡಾಗಿದೆ. ಲಾರಿ ಚಾಲಕ ಘಟನೆ ಬಳಿಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನ ಸಿಂಧನೂರು ತಾಲೂಕಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಎರಡು ಜೆಸಿಬಿಯಿಂದ ಅಪಘಾತವಾದ ವಾಹನಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT