ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜ್ಯ

ಹಾಲಿನ ಉತ್ಪನ್ನಗಳ ಮೇಲೆ ಶೇ.5 ರಷ್ಟು ಜಿಎಸ್‌ಟಿ, ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳಿಗೆ ಸೂಚನೆ- ಸಿಎಂ ಬೊಮ್ಮಾಯಿ

ಡೈರಿ ಉತ್ಪನ್ನಗಳು, ಪ್ಯಾಕ್ ಮಾಡಿದ ಮತ್ತು   ಬ್ರಾಂಡೆಡ್ ಆಹಾರ ಉತ್ಪನ್ನಗಳ ಮೇಲಿನ ಶೇ. 5 ರಷ್ಟು ಜಿಎಸ್‌ಟಿ ತೆರಿಗೆಯನ್ನು ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳನ್ನು ಕೇಳಿಕೊಳ್ಳುವುದಾಗಿ  ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆ ಕುರಿತು ಸಚಿವರ ಗುಂಪಿನ (ಜಿಒಎಂ) ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರು: ಡೈರಿ ಉತ್ಪನ್ನಗಳು, ಪ್ಯಾಕ್ ಮಾಡಿದ ಮತ್ತು   ಬ್ರಾಂಡೆಡ್ ಆಹಾರ ಉತ್ಪನ್ನಗಳ ಮೇಲಿನ ಶೇ. 5 ರಷ್ಟು ಜಿಎಸ್‌ಟಿ ತೆರಿಗೆಯನ್ನು ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳನ್ನು ಕೇಳಿಕೊಳ್ಳುವುದಾಗಿ  ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆ ಕುರಿತು ಸಚಿವರ ಗುಂಪಿನ (ಜಿಒಎಂ) ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರಿ ಸ್ವಾಮ್ಯದ ಕೆಜಿಎಂಫ್  ಮಜ್ಜಿಗೆ, ಲಸ್ಸಿ ಮತ್ತು ಮೊಸರು ಸೇರಿದಂತೆ ಅದರ ಉತ್ಪನ್ನಗಳ ದರಗಳನ್ನು ಪರಿಷ್ಕರಿಸಿದೆ. ತನ್ನ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವ ಕೆಎಂಎಫ್ ನಿರ್ಧಾರ ಗ್ರಾಹಕರಿಗೆ ಆಘಾತವನ್ನುಂಟುಮಾಡಿದೆ, ಅವರು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಇದರಿಂದಾಗಿ ಒತ್ತಡಕ್ಕೆ ಸಿಲುಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರದಿಂದ ಮರುಪಾವತಿ ಪಡೆಯುವ ನಿಬಂಧನೆ ಇರುವಾಗ, ತೆರಿಗೆ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸದಂತೆ ಡೀಲರ್ ಗಳಿಗೆ ಸಲಹೆ ನೀಡಿದ್ದಾರೆ. 

ಪ್ಯಾಕ್ ಮಾಡಲಾದ ಮತ್ತು ಬ್ರಾಂಡೆಡ್ ಆಹಾರ ಪದಾರ್ಥಗಳ ಮೇಲೆ ಮಾತ್ರ ಶೇ. 5 ರಷ್ಟು ಜಿಎಸ್ ಟಿ ಹಾಕಲಾಗುತ್ತಿದೆ. ಅಂದಮಾತ್ರಕ್ಕೆ ಇದನ್ನು ಗ್ರಾಹಕರಿಗೆ ವರ್ಗಾಯಿಲಾಗುತ್ತಿದೆ ಎಂದರ್ಥವಲ್ಲ,  ಏಕೆಂದರೆ ಮುಂದಿನ ದಿನಗಳಲ್ಲಿ ವ್ಯಾಪಾರಿಗಳು ಪಾವತಿಸಿದ ಸುಂಕವನ್ನು ಮರುಪಾವತಿ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಜಿಎಸ್‌ಟಿ ಕೌನ್ಸಿಲ್‌ ಗೆ ಸೂಚನೆಗಳನ್ನು ನೀಡುತ್ತೇನೆ  ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT